Advertisement

ಚಾರ್ಮಾಡಿ ಘಾಟ್‍ನಲ್ಲಿ ಮತ್ತೆ ಕಾಡ್ಗಿಚ್ಚು…ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿ

08:37 PM Mar 06, 2023 | Team Udayavani |

ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್‍ನ ಬಿದಿರುತಳ ಸಮೀಪ ಅರಣ್ಯದಲ್ಲಿ ಕಾಡ್ಗಿಚ್ಚಿನಿಂದಾಗಿ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ.

Advertisement

ಅರಣ್ಯದ ನಡುವೆ ಹಾದು ಹೋಗಿರುವ ರಸ್ತೆ ಬದಿಯಲ್ಲೇ ಬೆಂಕಿ ದಗದಗಿಸಿ ಉರಿಯುತ್ತಿದ್ದು ಬಿರುಬಿಸಿಲಿನಿಂದ ಒಣಗಿನಿಂತ ಹುಲ್ಲು, ಒಣಗಿದ ಎಲೆಗಳಿಂದಾಗಿ ವೇಗವಾಗಿ ಎಲ್ಲೆಡೆಗೆ ಹರಡುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದು ಒಂದೆಡೆ ಬೆಂಕಿ ನಂದಿಸಿದರೆ ಮತ್ತೊಂದು ಕಡೆಯಲ್ಲಿ ಬೆಂಕಿ ಕಾಣಿಸಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ.

ಕಳೆದ ಕೆಲ ದಿನಗಳಿಂದ ಚಾರ್ಮಾಡಿ ಘಾಟ್‍ನ ಆಲೇಕಾನ್ ಅರಣ್ಯ, ದೇವರಮನೆ, ಬಲ್ಲಾಳರಾಯನ ದುರ್ಗ ಭಾಗದಲ್ಲಿ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದೆ. ಪೆಬ್ರವರಿ ತಿಂಗಳಲ್ಲಿ ಸುರಿಯುವ ಮಳೆ ಈ ಬಾರಿ ಬಾರದೇ ಇರುವುದರಿಂದ ಕಾಡ್ಗಿಚ್ಚು ಹಬ್ಬುವುದು ಹೆಚ್ಚಾಗಿದೆ.

ಇದನ್ನೂ ಓದಿ: ಮಂಗಳೂರು ಕುಕ್ಕರ್​ ಕೇಸ್; ರೂವಾರಿ ಶಾರಿಕ್ ಚಿಕಿತ್ಸೆ ಪೂರ್ಣ: NIA ವಶಕ್ಕೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next