Advertisement

ಚಾರ್ಮಾಡಿ ಘಾಟ್: ಬಸ್ ಮತ್ತು ಕಾರಿನ ನಡುವೆ ಅಪಘಾತ ; ಟ್ರಾಫಿಕ್ ಜಾಮ್

10:09 PM Sep 14, 2022 | Team Udayavani |

ಕೊಟ್ಟಿಗೆಹಾರ : ಚಾರ್ಮಾಡಿ ಘಾಟ್ ನಲ್ಲಿ ಬಸ್ ಮತ್ತು ಕಾರಿನ ನಡುವೆ ಬುಧವಾರ ರಾತ್ರಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅಪಘಾತ ನಡೆದ ಬಳಿಕ ಒಂದು ಕಿಲೋಮೀಟರ್ ಗೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಉಂಟಾಗಿತ್ತು.

Advertisement

ಚಾರ್ಮಾಡಿ ಘಾಟ್ ನ ಬಿದರತಳ ಸಮೀಪ ಘಟನೆ ನಡೆದಿದ್ದು, ಕಾರು ಅರಸೀಕೆರೆಯಿಂದ ಧರ್ಮಸ್ಥಳಕ್ಕೆ ಹೋಗುತ್ತಿತ್ತು, ಬಸ್ ಧರ್ಮಸ್ಥಳದಿಂದ ಕಡೂರಿಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ.

ಗಾಯಾಳುಗಳಿಗೆ ಬಣಕಲ್ ನಲ್ಲಿ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆ ಗೆ ಮೂಡಿಗೆರೆಗೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಬಣಕಲ್ ಠಾಣಾಧಿಕಾರಿ ಗಾಯಿತ್ರಿ ಮತ್ತು ಸಿಬಂದಿಗಳು ಭೇಟಿ ನೀಡಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next