Advertisement

ಚಾರ್ಮಾಡಿ ಘಾಟ್: ವಾರದ ಹಿಂದೆ ಕಾಣಿಸಿಕೊಂಡಿದ್ದ ಹೆಬ್ಬಾವು ಮತ್ತೆ ಪ್ರತ್ಯಕ್ಷ!

06:35 PM Nov 10, 2022 | Team Udayavani |

ಕೊಟ್ಟಿಗೆಹಾರ:ಕಳೆದ ಒಂದು ವಾರದ ಹಿಂದೆ ಚಾರ್ಮಾಡಿ ಘಾಟ್ ನಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವೊಂದು ಮತ್ತೆ ಹೆದ್ದಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ನೀಡಿದೆ.

Advertisement

ಯಾವುದೋ ಪ್ರಾಣಿಯೊಂದನ್ನು ನುಂಗಿ ರಸ್ತೆಯ ಒಂದು ಬದಿಯಲ್ಲಿದ್ದ ಹೆಬ್ಬಾವಿನ ವೀಡಿಯೋ ವನ್ನು ಈ ಭಾಗವಾಗಿ ಪ್ರಯಾಣಿಸುತ್ತಿದ್ದ ಪ್ರವಾಸಿಗರಾದ ಅರೆನೂರು ಸುಪ್ರೀತ್ ಎಂಬುವವರು ಸೆರೆ ಹಿಡಿದಿದ್ದಾರೆ.

ವಾರದ ಹಿಂದೆಯಷ್ಟೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವು ಮತ್ತೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕಿದೆ‌. ಇದೀಗ ಹೆಬ್ಬಾವಿನ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next