Advertisement

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

01:21 PM Jul 04, 2024 | Team Udayavani |

ಚಿಕ್ಕಮಗಳೂರು: ಕಳೆದ ಕೆಲ ದಿನಗಳಿಂದ ಕಾಫಿನಾಡಿನಲ್ಲಿ ನಿರಂತರ ಮಳೆಯಾಗುತ್ತಿದ್ದು ಪರಿಣಾಮ ಚಾರ್ಮಾಡಿ ಘಾಟಿಯ ಹೆದ್ದಾರಿ ಹಾಗೂ ತಡೆಗೋಡೆಗಳಲ್ಲಿ ಬಿರುಕು ಕಂಡುಬಂದಿದ್ದು ಕುಸಿಯುವ ಭೀತಿ ಎದುರಾಗಿದೆ ಎನ್ನಲಾಗಿದೆ.

Advertisement

ಈ ಹಿಂದೆ ಕುಸಿದಿದ್ದ ಜಾಗದಲ್ಲಿ ಕಾಮಗಾರಿ ನಡೆದಿದ್ದು ಅದೇ ಜಾಗ ಸೇರಿದಂತೆ ಸುಮಾರು ಮೂರೂ ನಾಲ್ಕು ಕಡೆಗಳಲ್ಲಿ ಬಿರುಕು ಕಂಡುಬಂದಿದ್ದು ಕುಸಿಯುವ ಭೀತಿ ಎದುರಾಗಿದೆ.

100-200 ಅಡಿ ಮಣ್ಣು ತುಂಬಿಸಿ ರಸ್ತೆ ಸಿರ್ಮಿಸಿದ ಜಾಗದಲ್ಲೇ ಬಿರುಕು ಬಿಟ್ಟಿದೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಅದ್ವಾನ ಕಂಡು ಸ್ಥಳಿಯರು, ಪ್ರಯಾಣಿಕರಲ್ಲಿ ಆತಂಕ ಮನೆಮಾಡಿದೆ ಅಲ್ಲದೆ ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ಬಿಟ್ಟಿರುವುದು ಕಾಣದಂತಾಗಿದೆ.

ಕೋಟ್ಯಂತರ ರೂಪಾಯಿ ವ್ಯಯಿಸಿ ಹೆದ್ದಾರಿ ಕಾಮಗಾರಿ ನಡೆಸಿದರೂ ಯಾವುದೇ ಪ್ರಯೋಜನ ಆಗಲಿಲ್ಲ ಕಳಪೆ ಗುಣಮಟ್ಟದ ಕಾಮಗಾರಿ ನಡೆದಿದೆ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ.

Advertisement

ಮುಳುಗುವ ಭೀತಿಯಲ್ಲಿ ಹೆಬ್ಬಾಳ ಸೇತುವೆ
ಕಳೆದ ಕೆಲ ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಭದ್ರಾ ನದಿಯಲ್ಲಿ ನೀರಿನ ಹರಿವಿನ ಮಟ್ಟದಲ್ಲಿ ಭಾರೀ ಏರಿಕೆಯಾಗಿದ್ದು ಇದೀಗ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಮಟ್ಟಕ್ಕೆ ತಲುಪಿದ್ದು ಒಂದು ವೇಳೆ ಸೇತುವೆ ಮುಳುಗಡೆಯಾದರೆ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಸಂಪರ್ಕ ಕಡಿತಗೊಳ್ಳಲಿದೆ. ಕಳಸ-ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವೂ ಬಂದ್ ಆಗಲಿದೆ ಎನ್ನಲಾಗಿದೆ ಮುಂಜಾಗ್ರತಾ ಕ್ರಮವಾಗಿ ಕಳಸ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು ಒಂದು ವೇಳೆ ನೀರಿನ ಮಟ್ಟ ಏರಿಕೆಯಾದರೆ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Advertisement

Udayavani is now on Telegram. Click here to join our channel and stay updated with the latest news.

Next