Advertisement

ಚಾರ್ಮಾಡಿ ಘಾಟ್‌: ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆ

06:28 PM Mar 25, 2022 | Team Udayavani |

ಕೊಟ್ಟಿಗೆಹಾರ:ಚಾರ್ಮಾಡಿ ಘಾಟ್‌ನ ಸೋಮನಕಾಡು ಸಮೀಪ ಅರಣ್ಯದಲ್ಲಿ ಅಪರಿಚಿತ ಪುರುಷನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

Advertisement

ಸೋಮನಕಾಡು ಅರಣ್ಯದಲ್ಲಿ ನೇಣು ಬಿಗಿದ ಮತ್ತು ಕೊಳೆತ ಸ್ಥಿತಿಯಲ್ಲಿದ್ದ ಶವವನ್ನು ಕಂಡ ಸ್ಥಳೀಯರು ಬಣಕಲ್ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಭೇಟಿ ನೀಡಿದ ಬಣಕಲ್ ಪೊಲೀಸ್ ಠಾಣೆ ಪಿಎಸ್‌ಐ ರೇಣುಕಾ, ಎಎಸ್‌ಐ ಶಶಿ ಹಾಗೂ ಸಿಬ್ಬಂದಿಗಳು ಮತ್ತು ಸಾಮಾಜಿಕ ಕಾರ್ಯಕರ್ತ ಆರೀಪ್ ಅರಣ್ಯದ ನಡುವೆ ಇದ್ದ ಮೃತದೇಹವನ್ನು ಮುಖ್ಯ ರಸ್ತೆಗೆ ತಂದು ಮೂಡಿಗೆರೆ ಶವಾಗಾರಕ್ಕೆ ರವಾನಿಸಿದ್ದಾರೆ.

ಬಣಕಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next