ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಬಸ್ ಮತ್ತು ಸ್ಕೂಟರ್ ನಡುವೆ ಸೋಮವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಚಾರ್ಮಾಡಿ ಘಾಟಿ ರಸ್ತೆಯ ಮೂಲಕವಾಗಿ ಹರಪನಹಳ್ಳಿಗೆ ಹೋಗುತ್ತಿದ್ದ ಸರಕಾರಿ ಬಸ್ ಹಾಗೂ ಚಾರ್ಮಾಡಿ ಕಡೆ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ.
ಸ್ಕೂಟರ್ ಸವಾರ ಬಾಳೆಹೊನ್ನೂರಿನ ಮಾಗುಂಡಿ ನಿವಾಸಿ ಇರ್ಫಾನ್ (21) ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹಸವಾರ ಬಾಳೆಹೊನ್ನೂರು ನಿವಾಸಿ ಅವಿನ್ (22) ಗಂಭೀರ ಗಾಯಗೊಂಡಿದ್ದು ಕಕ್ಕಿಂಜೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.