Advertisement

ಚಾರ್ಮಾಡಿ: ಟಿಟಿ, ತರಕಾರಿ ಸಾಗಾಟ ವಾಹನ ಪಲ್ಟಿ

10:42 PM Jun 10, 2023 | Team Udayavani |

ಬೆಳ್ತಂಗಡಿ: ಕೊಟ್ಟಿಗೆಹಾರ ಕಡೆಯಿಂದ ಉಜಿರೆಯತ್ತ ಸಂಚರಿಸುತ್ತಿದ್ದ ಟೆಂಪೋ ಟ್ರಾವೆಲರ್‌ ಮತ್ತು ತರಕಾರಿ ಸಾಗಾಟದ ವಾಹನ ಚಾರ್ಮಾಡಿ ಪೇಟೆಯಲ್ಲಿ ಪಲ್ಟಿಯಾದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.

Advertisement

ಮಧ್ಯಾಹ್ನ 2 ಗಂಟೆ ಸುಮಾರಿಗೆ ಪೇಟೆ ಪ್ರದೇಶದ ಅಂಗಡಿಯೊಂದರ ಮುಂಭಾಗ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲರ್‌ ಉರುಳಿ ಬಿದ್ದಿದೆ. ಅದೃಷ್ಟವಶಾತ್‌ ಟಿಟಿ ಅಂಗಡಿಯಿಂದ ಅನತಿ ದೂರದಲ್ಲಿ ಪಲ್ಟಿಯಾದ ಕಾರಣ ಹೆಚ್ಚಿನ ಅನಾಹುತವಾಗಿಲ್ಲ.

ಈ ಘಟನೆ ನಡೆದ ಸ್ವಲ್ಪ ಹೊತ್ತಿನಲ್ಲಿ ಇಲ್ಲಿಂದ 100 ಮೀ. ಮುಂಭಾಗದಲ್ಲಿ ತರಕಾರಿ ಸಾಗಾಟದ ವಾಹನ ರಸ್ತೆ ಬದಿಗೆ ಜಾರಿ ಚರಂಡಿಗೆ ಬಿದ್ದಿದೆ. ಎರಡು ಘಟನೆಗಳಲ್ಲಿ ಯಾರಿಗೂ ಹೆಚ್ಚಿನ ಗಾಯಗಳಾಗಿಲ್ಲ.

ಚಾರ್ಮಾಡಿ ಒಂದನೇ ತಿರುವಿನಿಂದ ಚಾರ್ಮಾಡಿ ಹಳ್ಳದವರೆಗಿನ 3 ಕಿಮೀ ವ್ಯಾಪ್ತಿಯ ರಸ್ತೆ ಕಳೆದ ನಾಲ್ಕು ವರ್ಷಗಳ ಹಿಂದೆ ಅಭಿವೃದ್ಧಿಪಡಿಸಲಾಗಿದೆ. ಈ 3 ಕಿಮೀ. ವ್ಯಾಪ್ತಿಯಲ್ಲಿ ಹಾಕಲಾಗಿರುವ ಡಾಮರು ವಿಪರೀತ ನಯವಾಗಿದ್ದು ಮಳೆಯ ಸಮಯ ಇಲ್ಲಿ ವಾಹನಗಳು ಚಾಲಕರ ಹತೋಟಿಗೆ ಸಿಗದೇ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next