ಬೆಳ್ತಂಗಡಿ: ಮಂಗಳೂರು – ಚಿಕ್ಕಮಗಳೂರು ರಸ್ತೆಯ ಚಾರ್ಮಾಡಿ ಘಾಟ್ 2 ಮತ್ತು 3 ನೇ ತಿರುವಿನ ಮಧ್ಯೆ ಬಂಡೆ ಕುಸಿದ ಘಟನೆ ಬುಧವಾರ ಸಂಜೆ ನಡೆದಿದೆ.
ಸಂಜೆ ಸುಮಾರು 6.20ರ ಹೊತ್ತಿಗೆ ಬೃಹದಾಕಾರದ ಎರಡು ಬಂಡೆಗಳು ಕುಸಿದಿದ್ದು, ಸದ್ಯ ಒಂದು ವಾಹನ ಸಾಗುವಷ್ಟು ತೆರವು ಮಾಡಲಾಗಿದೆ.
ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದ್ದು. ಸಂಜೆ 7ರ ಬಳಿಕ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ನಿರ್ಭಂದ ಇರುವುದರಿಂದ ರಾತ್ರಿ ತೆರವು ಕಾರ್ಯ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರಾವಳಿಯಲ್ಲಿ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಣ್ಣಪುಟ್ಟ ಭೂಕುಸಿತ ಉಂಟಾಗಿದೆ.
ತೆರವು ಕಾರ್ಯಾಚರಣೆಗೆ ಜಿಸಿಬಿಗಳನ್ನು ಈಗಾಗಲೇ ನಿಯೋಜಿಸಲಾಗಿದ್ದು ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಈಗಾಗಲೆ ವಾಹನ ತೆರಳಲು ಕೆಲವೆಡೆ ಅಪಾಯದ ಸ್ಥಿತಿ ಇರುವುದರಿಂದ ವಾಹನ ಸವಾರರು ಎಚ್ಚರ ವಹಿಸಬೇಕಾಗಿದೆ.