Advertisement

ಚಾರ್ಮಾಡಿ ಘಾಟ್ ಕಂದಕಕ್ಕೆ ಉರುಳಿದ ಕಾರು

09:03 PM Sep 16, 2021 | Team Udayavani |

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಕಾರು ಚಾರ್ಮಾಡಿ ಘಾಟ್ ನ ಎಂಟನೇ ತಿರುವಿನಲ್ಲಿ ಕಂದಕಕ್ಕೆ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Advertisement

ಗುರುವಾರ ಸಂಜೆ ಉಜಿರೆಯಿಂದ ಮೂಡಿಗೆರೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದಾಗಿ ಸ್ವಲ್ಪ ಸಮಯದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದ ಚಾರ್ಮಾಡಿ ಘಾಟ್ ನಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next