Advertisement

Surat: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ: ಸುಟ್ಟು ಕರಕಲಾದ 7 ಕಾರ್ಮಿಕರ ಶವ ಪತ್ತೆ

03:03 PM Nov 30, 2023 | sudhir |

ಗುಜರಾತ್‌: ಸೂರತ್‌ನ ಈಥರ್ ಇಂಡಸ್ಟ್ರೀಸ್‌ನ ಉತ್ಪಾದನಾ ಸ್ಥಳದಲ್ಲಿ ಸಂಭವಿಸಿದ ಬೆಂಕಿ ಅವಘಡದ ಬಳಿಕ ಸುಮಾರು ಏಳು ಕಾರ್ಮಿಕರ ಶವಗಳನ್ನು ಹೊರತೆಗೆಯಲಾಗಿದ್ದು, ಇತರ 27 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

Advertisement

ಬುಧವಾರ ಮುಂಜಾನೆ ಈ ಘಟನೆ ನಡೆದಿದ್ದು, ಏಳು ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ಆ ಬಳಿಕ ರಕ್ಷಣಾ ತಂಡ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಗುರುವಾರ ಏಳು ದೇಹಗಳು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತ ದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಿದ್ದಾರೆ. ವರದಿಗಳ ಪ್ರಕಾರ, ರಾಸಾಯನಿಕ ಶೇಖರಣಾ ತೊಟ್ಟಿಯಲ್ಲಿ ಸ್ಫೋಟ ಸಂಭವಿಸಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿದ್ದು ತನಿಖೆ ಬಳಿಕ ನಿಜವಾದ ಕಾರಣ ತಿಳಿದು ಬರಲಿದೆ ಎಂದು ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಇದನ್ನೂ ಓದಿ: ಡಿಕೆಶಿಗೆ ಹೈಕೋರ್ಟ್ ರಿಲೀಫ್ ಕೊಟ್ಟಿಲ್ಲ, ಇವರೇ ತೆಗೆದುಕೊಂಡಿದ್ದಾರೆ: ಕುಮಾರಸ್ವಾಮಿ

Advertisement

Udayavani is now on Telegram. Click here to join our channel and stay updated with the latest news.

Next