Advertisement

ಸಮಾಜ ಸುಧಾರಿಸಿದ ನಿಜಶರಣ ಚೌಡಯ್ಯ

06:15 PM Jan 22, 2021 | Team Udayavani |

ಯಾದಗಿರಿ: ನೇರ, ನಿಷ್ಠುರ, ನಡೆ, ನುಡಿಗಳಿಂದ ಸಮಾಜದಲ್ಲಿನ ಅಸ್ಪೃಶ್ಯತೆ ಹಾಗೂ ಮೂಢನಂಬಿಕೆಯನ್ನು ಹೋಗಲಾಡಿಸಲು ಶ್ರಮಿಸಿದ ಮಹಾನ್‌ ವಚನಗಾರ ನಿಜಶರಣ ಅಂಬಿಗರ ಚೌಡಯ್ಯ ಎಂದು ಮಾಜಿ ಸಚಿವ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಬಾಬುರಾವ ಚಿಂಚನಸೂರ ಅಭಿಪ್ರಾಯಪಟ್ಟರು. ನಗರದ ಜಿಲ್ಲಾ ಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Advertisement

ಯಾರಿಗೂ ಹೆದರದೆ, ಅಳುಕದೇ ಸಮಾಜದ ಅಂಕುಡೊಂಕುಗಳನ್ನು ತಿದ್ದಿದವರು. ಕಾಯಕ ನಿಷ್ಠೆ ಉಳ್ಳವರು, ಹಸಿದವರಿಗೆ ಅನ್ನ ಕೊಡಿ, ದುಃಖದಲ್ಲಿದ್ದವರಿಗೆ ಸಾಂತ್ವನ ಹೇಳಿ, ಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿ ಎಂದು ತಮ್ಮ ವಚನದ ಮೂಲಕ ಜಗತ್ತಿಗೆ ಸಾರಿದವರು ಅಂಬಿಗರ ಚೌಡಯ್ಯನವರು ಎಂದು ಬಣ್ಣಿಸಿದರು.

ಜಾತಿ ಅಭಿಮಾನ ಇರಲಿ. ದುರಾಭಿಮಾನ ಬೇಡ. ಇಂತಹ ಮಹಾತ್ಮರ ಜಯಂತಿಯನ್ನು ಜಾತಿ ಆಧಾರದಲ್ಲಿ ತಾರತಮ್ಯ ಮಾಡದೇ ಎಲ್ಲಾ ವರ್ಗದವರನ್ನು ಒಗ್ಗೂಡಿ ಆಚರಿಸಬೇಕು ಎಂದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್‌ ಅವರು ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಪ್ಪಾರ್ಚನ ಮಾಡಿ ಗೌರವ ಸಲ್ಲಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೋಟ್ರೇಶ, ನಗರಾಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಬಸವರಾಜ ಎಸ್‌.ಚಂಡಕ್ರಿ, ಅಂಬಿಗರ ಚೌಡಯ್ಯ ಸಮಾಜದ ಜಿಲ್ಲಾಧ್ಯಕ್ಷ ಹಣಮಂತ ಮಡ್ಡಿ, ಮೌಲಾಲಿ ಅನಾಪುರ ಸೇರಿದಂತೆ ಸಮಾಜದ ಗಣ್ಯರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next