Advertisement
ರಾಜಾಜಿನಗರ ನಿವಾಸಿ ಅರುಣ್ ಸುದರ್ಶನ್(40) ಬಂಧಿತ. ಶ್ರುತಿ ಎಂಬವರ ಕುಟುಂಬದ ಮೇಲಿನ ದ್ವೇಷಕ್ಕಾಗಿ ಈ ರೀತಿಯ ಕೃತ್ಯ ಎಸಗಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ವಿಚಾರ ತಿಳಿದುಕೊಂಡ ಸುಧಾಮೂರ್ತಿಯವರ ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ ಮಮತಾ ಸಂಜಯ್ ಎಂಬವರು ಲಾವಣ್ಯಾ ಮತ್ತು ಶ್ರುತಿ ಎಂಬವರ ವಿರುದ್ಧ ದೂರು ನೀಡಿದ್ದರು.
ಬೆಂಗಳೂರಿನಲ್ಲಿ ಇವೆಂಟ್ ಮ್ಯಾನೇಜ್‌ಮೆಂಟ್ ನಡೆಸುವ ಆರೋಪಿ ಅರುಣ್ ಹಾಗೂ ಅಮೆರಿಕದಲ್ಲಿ ವಾಸವಾಗಿರುವ ಶ್ರುತಿ ಪತಿ ಹತ್ತಿರದ ಸಂಬಂಧಿಕರು ಹಾಗೂ ಬಾಲ್ಯ ಸ್ನೇಹಿತರು. ಅನಂತರ ಎರಡು ಕುಟುಂಬಗಳು ದೂರವಾಗಿದ್ದವು. ಜತೆಗೆ ಅಮೆರಿಕದಲ್ಲಿ ನೆಲೆಸಿದ್ದ ಶ್ರುತಿ ದಂಪತಿ 10 ವರ್ಷಗಳಿಂದ ವೈಯಕ್ತಿಕ ವಿಚಾರಗಳಿಗೆ ಅರುಣ್ ಜತೆ ಸಂಪರ್ಕ ಕಡಿದುಕೊಂಡಿದ್ದರು. ಹೀಗಾಗಿ ಶ್ರುತಿ ದಂಪತಿ ವಿರುದ್ಧ ಆರೋಪಿ ಅರುಣ್ ದ್ವೇಷ ಸಾಧಿಸುತ್ತಿದ್ದ. ಈ ಮಧ್ಯೆ ಕನ್ನಡ ಕೂಟ ಆಫ್ ನಾರ್ತ್ ಕ್ಯಾಲಿಫೋನಿರ್ಯಾ(ಕೆಕೆಎನ್‌ಸಿ)ಯಿಂದ ಅಮೆರಿಕದ ಸೇವಾ ಮಿಲ್ಟಿಟಸ್‌ನಲ್ಲಿ ಸೆ.26ರಂದು ಡಾ| ಸುಧಾಮೂರ್ತಿ ಜತೆಗೆ ಮೀಟ್ ಆ್ಯಂಡ್ ಗ್ರೀಟ್ ವಿತ್ ಡಾ| ಸುಧಾಮೂರ್ತಿ ಎಂಬ ಕಾರ್ಯಕ್ರಮ ಆಯೋಜಿಸಲು ಶ್ರುತಿ ಆಸಕ್ತರಾಗಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿದ್ದ ಸಂಬಂಧಿ ಅರುಣ್‌ಗೆ ಕರೆ ಮಾಡಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದರು. ಈ ಕಾರ್ಯಕ್ರಮಕ್ಕೆ ಡಾ| ಸುಧಾಮೂರ್ತಿ ಅವರನ್ನು ಮುಖ್ಯಅತಿಥಿಯಾಗಿ ಕರೆತರಲು ಸಾಧ್ಯವೇ ಎಂದು ಕೇಳಿದ್ದರು. ಅದಕ್ಕೆ ಒಪ್ಪಿದ ಅರುಣ್, ಈ ಮೂಲಕ ಅಮೆರಿಕದಲ್ಲಿ ಶ್ರುತಿ ದಂಪತಿ ಮರ್ಯಾದೆಗೆ ಧಕ್ಕೆ ತರಲು ನಿರ್ಧರಿಸಿದ್ದ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಪೊಲೀಸರು ಹೇಳಿದರು. ಲಾವಣ್ಯ ಹೆಸರಿನಲ್ಲಿ ನಂಬಿಸಿ ವಂಚನೆ!
Related Articles
Advertisement
ಮತ್ತೂಂದೆಡೆ ಆರೋಪಿಯ ಮಾತು ನಂಬಿದ ಶ್ರುತಿ ದಂಪತಿ ಅಮೆರಿಕದಲ್ಲಿ ಮೀಟ್ ಆ್ಯಂಡ್ ಗ್ರೀಟ್ ವಿತ್ ಡಾ| ಸುಧಾಮೂರ್ತಿ ಎಂಬ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದ್ದರು. ಈ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ಸಹ ನೀಡಿದ್ದರು. ಈ ಕಾರ್ಯಕ್ರಮಕ್ಕೆ ತಲಾ 40 ಡಾಲರ್ ಟಿಕೆಟ್ ದರ ನಿಗದಿಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಅದನ್ನು ಗಮನಿಸಿದ್ದ ಸುಧಾಮೂರ್ತಿ ಅವರ ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ ಮಮತಾ ಸಂಜಯ್ ಆಶ್ಚರ್ಯಗೊಂಡು ಕಾರ್ಯಕ್ರಮ ಆಯೋಜಕರನ್ನು ಸಂಪರ್ಕಿಸಿದಾಗ ಲಾವಣ್ಯಾ ಮತ್ತು ಶ್ರುತಿ ಹೆಸರು ಹೇಳಿದ್ದರು. ಹೀಗಾಗಿ ಡಾ| ಸುಧಾಮೂರ್ತಿ ಹೆಸರು ದುರ್ಬಳಕೆ ಮಾಡಿಕೊಂಡು ಹಣ ಸಂಗ್ರಹಿಸಿ ವಂಚಿಸಿದ ಆರೋಪದಡಿ ಶ್ರುತಿ ಮತ್ತು ಲಾವಣ್ಯ ವಿರುದ್ಧ ಮಮತಾ ಸಂಜಯ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.