ಚಿಕ್ಕಮಗಳೂರು: ಚಿಕ್ಕಮಗಳೂರು ಸಮೀಪದ ಗೌಡನಹಳ್ಳಿಯಲ್ಲಿ ಕಿರುವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ತಾಂತ್ರಿಕವಾಗಿ ಪರಿಶೀಲನೆ ನಡೆಸಿ ನಿಗದಿತ ಅವಧಿಯೊಳಗೆ ವರದಿ ನೀಡುವಂತೆ ಮೂಲಸೌಕರ್ಯ, ಬಂದರು, ಒಳನಾಡು, ಜಲ ಸಾರಿಗೆ ಹಜ್ ಮತ್ತು ವಕ್f ಸಚಿವ ಆನಂದ್ ಸಿಂಗ್ ಸಂಬಂಧಪಟ್ಟ ಅ ಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರ ನಗರದ ಸಮೀಪದಲ್ಲಿರುವ ಗೌಡನಹಳ್ಳಿ ಕಿರುವಿಮಾನ ನಿಲ್ದಾಣ ಸ್ಥಳ ಪರಿಶೀಲನೆ ನಡೆಸಿ ನಂತರ ಅ ಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲೆ ಪ್ರವಾಸೋದ್ಯಮ ತಾಣವಾಗಿ ಗುರುತಿಸಿಕೊಂಡಿದೆ. ನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದು ವಿಮಾನ ನಿಲ್ದಾಣದ ಅವಶ್ಯಕತೆ ಇದೆ. ಅದಕ್ಕಾಗಿ ಸ್ಥಳ ಗುರುತಿಸಲಾಗಿತ್ತು. ಆದರೆ, ಅ ಸ್ಥಳವು ಎಟಿಆರ್ ಟೊ ಸೀಟರ್ ವಿಮಾನ ನಿಲ್ದಾಣಕ್ಕೆ ಮಾತ್ರ ಸೂಕ್ತವಾಗಿದ್ದು, ಪ್ರವಾಸೋದ್ಯಮ ಹಾಗೂ ಕೈಗಾರಿಕಾ ದೃಷ್ಟಿಯಿಂದ ಎಟಿಆರ್ 72 ಸೀಟರ್ ವಿಮಾನ ನಿಲ್ದಾಣದ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಸೂಕ್ತ ಸ್ಥಳ ಗುರುತಿಸಿ ತಾಂತ್ರಿಕವಾಗಿ ಪರಿಶೀಲನೆ ನಡೆಸಿ ಮೇ.15ರೊಳಗೆ ವರದಿ ಸಲ್ಲಿಸುವಂತೆ ತಿಳಿಸಿದರು.
ಅನೇಕ ವರ್ಷಗಳಿಂದ ಅಭಿವೃದ್ಧಿಯಾಗದೇ ನನೆಗುದಿಗೆ ಬಿದ್ದಿದ್ದ ವಿಮಾನ ನಿಲ್ದಾಣದ ಅಭಿವೃದ್ಧಿ ಕುರಿತಂತೆ ಅ ಧಿಕಾರಿಗಳು ಸೂಕ್ತವಾದ ಸ್ಥಳವನ್ನು ಗುರುತಿಸಿ ವರದಿಸಲ್ಲಿಸಿದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಶಾಸಕ ಸಿ.ಟಿ. ರವಿ ಮಾತನಾಡಿ, ಕಿರು ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡಲು ಗೌಡನಹಳ್ಳಿಯಲ್ಲಿ 120 ಎಕರೆ 22ಗುಂಟೆ ಸರ್ಕಾರಿ ಜಾಗವನ್ನು ನಿಲ್ದಾಣಕ್ಕಾಗಿ ಮೀಸಲಿಡಲಾಗಿತ್ತು. ಇದು ಕೇವಲ ಎಟಿಆರ್ 10 ಸೀಟರ್ ವಿಮಾನ ನಿಲ್ದಾಣಕ್ಕೆ ಮಾತ್ರ ಸೂಕ್ತವಾಗಿದೆ. ಆದರೆ ಎಟಿಆರ್ 72 ಸೀಟರ್ ವಿಮಾನ ನಿಲ್ದಾಣಕ್ಕೆ 200 ಎಕರೆ ಸ್ಥಳದ ಅವಶ್ಯಕತೆ ಇದ್ದು ಗೌಡನಹಳ್ಳಿಯಲ್ಲಿರುವ ಸ್ಥಳವನ್ನು ಪರಿಶೀಲಿಸಿ, ಸೂಕ್ತವಾಗದಿದ್ದರೆ ಬೇರೆ ಪ್ರದೇಶದಲ್ಲಿ ಸ್ಥಳ ಗುರುತಿಸಿ ತಾಂತ್ರಿಕವಾಗಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದರು.
ಚಿಕ್ಕಮಗಳೂರು ನಗರದಲ್ಲಿ ಎಟಿಆರ್ 10 ಸೀಟರ್ನ ವಿಮಾನ ನಿಲ್ದಾಣಕ್ಕೆ ನಿರ್ಧಾರ ಮಾಡಲಾಗಿತ್ತು. ಇತ್ತೀಚೆಗೆ ಬಂದ ಸಲಹೆ ಪ್ರಕಾರ ಎಟಿಆರ್ 72 ಸೀಟರ್ ವಿಮಾನ ನಿಲ್ದಾಣಕ್ಕೆ ಸ್ಥಳದ ಅಭಾವಿರುವುದರಿಂದ ಸೂಕ್ತವಾದ ಸ್ಥಳವನ್ನು ಗುರುತಿಸುವಂತೆ ಅ ಧಿಕಾರಿಗಳಿಗೆ ಸೂಚಿಸಿದರು. ಜಿಪಂ ಉಪಾಧ್ಯಕ್ಷ ಬಿ.ಜೆ. ಸೋಮಶೇಖರಪ್ಪ, ಜಿಲ್ಲಾ ಧಿಕಾರಿ ಕೆ.ಎನ್. ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಎಂ.ಎಚ್. ಅಕ್ಷಯ್, ಉಪವಿಭಾಗಾಧಿಕಾರಿ ಡಾ| ಎಚ್.ಎಲ್. ನಾಗರಾಜ್ ಮತ್ತಿತರರು ಇದ್ದರು.