Advertisement
ನಗರದ ಜಿಲ್ಲಾಡಳಿತ ಭವನದ ಕೃಷಿ ಇಲಾಖೆಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಮೇನಲ್ಲಿ 2-3 ದಿನಗಳ ಕಾಲ ಸುರಿದ ಮಳೆಯಿಂದ ಕೋಟಿಗಟ್ಟಲೇ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಂಭವವಿದ್ದು, ಎಲ್ಲ ಅಧಿ ಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಸಣ್ಣ ನೀರಾವರಿ ಇಲಾಖೆಯಿಂದ ಹಳ್ಳ, ಡ್ಯಾಂಗಳ ವ್ಯಾಪ್ತಿಯಲ್ಲಿ ವಾಸಿಸುವ ಜನರಿಗೆ ಮುನ್ನೆಚ್ಚರಿಕೆ ನೀಡಿ, ಅಗತ್ಯವಿದ್ದರೆ ಸ್ಥಳಾಂತರಕ್ಕೆ ಸೂಚಿಸಬೇಕು. ಯಾವುದೇ ಸೂಚನೆ ಇಲ್ಲದೇ ಏಕಾಏಕಿ ಡ್ಯಾಂಗಳಿಂದ ನೀರು ಬಿಡುಗಡೆ ಮಾಡಬೇಡಿ. ಮಳೆಗಾಲ ಮುಗಿಯುವವರೆಗೂ ಎಲ್ಲ ಇಲಾಖೆಗಳ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವುದು ಕಡ್ಡಾಯ. ಆದೇಶ ಪಾಲಿಸದಿದ್ದರೆ ಅಂತಹವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಾಲೆಗಳು ಆರಂಭವಾಗಿದ್ದು, ಶಾಲಾ ಕೊಠಡಿಗಳು ಸುವ್ಯವಸ್ಥೆಯಲ್ಲಿರುವ ಬಗ್ಗೆ ಖಾತ್ರಿ ಪಡಿಸಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ನೀಡಿ. ದುರಸ್ತಿಯಲ್ಲಿರುವ ಶಾಲಾ ಕೊಠಡಿಗಳಲ್ಲಿ ತರಗತಿ ತೆಗೆದುಕೊಳ್ಳಬೇಡಿ. ವಸತಿ ಶಾಲೆಯಲ್ಲಿನ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಬೇಕು. ಎಲ್ಲ ತಾಪಂ ಇಒಗಳು ಪ್ರತಿದಿನ ಶಾಲೆ ಆಯ್ಕೆ ಮಾಡಿ ಮಧ್ಯಾಹ್ನದ ಊಟವನ್ನು ವಿದ್ಯಾರ್ಥಿಗಳೊಂದಿಗೆ ಮಾಡಬೇಕು. ವಾರದಲ್ಲಿ ಕನಿಷ್ಟ ಮೂರು ದಿನವಾದರೂ ನಿಮ್ಮ ವ್ಯಾಪ್ತಿಯ ವಸತಿ ಶಾಲೆಯಲ್ಲಿ ಊಟ ಮಾಡಬೇಕು. ವಿದ್ಯಾರ್ಥಿಗಳಿಂದ ಮಾಹಿತಿ ಸಂಗ್ರಹಿಸಿ, ಕೊರತೆ ಇದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಯೋ ಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಿದೆ. ರಾಜ್ಯ ಸಚಿವಾಲಯದಲ್ಲಿ ಪ್ರತಿ ವಸತಿ ಶಾಲೆಯ ಇ-ಹಾಜರಾತಿ ಪರಿಶೀಲಿಸಲಾಗುತ್ತಿದೆ. ಹಾಜರಾತಿಗೆ ಅನುಗುಣವಾಗಿ ವಿದ್ಯಾರ್ಥಿಗಳ ಆಹಾರ ಪೂರೈಕೆ ಬಿಲ್ ಸಲ್ಲಿಸಬೇಕು. ಅಕ್ರಮ ಕಂಡುಬಂದರೆ ಸಂಬಂಧಿ ಸಿದ ತಾಲೂಕು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳಿಂದ ಹಣ ಮರುಪಾವತಿ ಮಾಡಿಕೊಳ್ಳಲಾಗುತ್ತದೆ. ಶಾಲೆಗಳಿಗೆ ವಿತರಿಸುವ ಡೆಸ್ಕ್, ಮುಂತಾದ ಪೀಠೊಪಕರಣ ಶಾಲಾ ಎಸ್‌ಡಿಎಂಸಿ ಸಮಿತಿ ಹಾಗೂ ಶಾಲಾ ಮುಖ್ಯೋಪಾಧ್ಯಾಯರ ಸಮ್ಮುಖದಲ್ಲಿ ವಿತರಣೆ ಮಾಡಬೇಕು. ಗುಣಮಟ್ಟದ ಬಗ್ಗೆ ಎಸ್ ಡಿಎಂಸಿ ಸಮಿತಿ ಹಾಗೂ ಮುಖ್ಯೋಪಾಧ್ಯಾಯರು ಜಂಟಿಯಾಗಿ ಪ್ರಮಾಣ ಪತ್ರ ನೀಡಬೇಕು. ಸಾಮಗ್ರಿ ಪೂರೈಕೆದಾರರು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಜಿಪಂನ ಅನಿರ್ಬಂಧಿತ ಅನುದಾನದಲ್ಲಿ ಆರಂಭವಾದ ಕಾಮಗಾರಿಗಳು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳ್ಳಬೇಕು. ಅನಗತ್ಯ ವಿಳಂಬ, ಕಳಪೆ ಕಾಮಗಾರಿ ನಡೆಸುವ ಅನುಷ್ಠಾನ ಏಜೆನ್ಸಿ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್, ಜಿಪಂ ಸಿಇಒ ಬಿ. ಫೌಜಿಯಾ ತರನ್ನುಮ್, ಜಿಪಂ ಉಪಕಾರ್ಯದರ್ಶಿ ಶರಣಬಸವರಾಜ, ಯೋಜನಾ ನಿರ್ದೇಶಕ ಟಿ. ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.