Advertisement
ಬೆಂಗಳೂರಿನ ಕೆಂಪೇಗೌಡ ರಸ್ತೆಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ಯೋಜನೆಗಳಡಿ ಫಲಾನುಭವಿಗಳ ಆಯ್ಕೆ ಮಾಡಲು ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಬೇಕು. ತಾಲೂಕು ಮಟ್ಟದ ಅಧಿಕಾರಿಗಳು ಸಭೆ ನಡೆಸದೇ ಶಾಸಕರ ಹಾಗೂ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳ ಸಹಿ ಪಡೆದು ಫಲಾನುಭವಿಗಳ ಆಯ್ಕೆಗೊಳಿ ಸಲಾಗುತ್ತದೆ. ಯಾವುದೇ ಕಡತಕ್ಕೆ ಸಹಿ ಹಾಕುವಾಗ ತಾಲೂಕು ಕಾರ್ಯ ನಿರ್ವಹ
ಣಾಧಿಕಾರಿಗಳು ಸರಿಯಾಗಿ ಓದಿ ಪರಿಶೀಲಿಸಿ, ಸಹಿ ಮಾಡುವಂತೆ ಸೂಚಿಸಿದರು. ಮುಂದೆಯೂ ಇದೇ ಪುನಾರಾವರ್ತನೆಯಾದರೆ ಅಂಥವರ ಶಿಸ್ತು ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಅಧ್ಯಕ್ಷರ ಅಸಮಾಧಾನ: ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಪಂಚಾ ಯತಿ ಎಂಜಿನಿಯರಿಂಗ್ ವಿಭಾಗ ಇನ್ನಿತರ ಇಲಾಖೆಗಳು ಕಡಿಮೆ ಪ್ರಗತಿ ಸಾಧಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧ್ಯಕ್ಷರು, ಯೋಜನೆಗಳಿಗೆ ನಿಗದಿಯಾದ ಅನುದಾನ ಖರ್ಚು ಮಾಡಲು ಅಧಿಕಾರಿಗಳು ಮಾರ್ಚ್ ಅಂತ್ಯದವರೆಗೆ ಕಾಯುವುದು ಸರಿಯಲ್ಲ.
Related Articles
Advertisement
ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಯೋಜನೆ ಸೇರಿ ದಂತೆ ವಿವಿಧ ಯೋಜನೆಗಳಡಿ, ಪ್ರಸಕ್ತ ಸಾಲಿ ನಲ್ಲಿ ವಿವಿಧ ಇಲಾಖೆಗಳಿಗೆ ಬಿಡುಗಡೆ ಯಾದ ಅನುದಾನವನ್ನು ಫೆಬ್ರವರಿ ತಿಂಗಳಾಂತ್ಯಕ್ಕೆ ಬಳಕೆ ಮಾಡಿ ಪ್ರಗತಿ ಸಾಧಿಸದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದೆಂದರು.
ಕಾರಣ ಕೇಳಿ ನೋಟಿಸ್: ನಿಗಮ ಹಾಗೂ ಮಂಡಳಿಗಳ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಡೆಯುವ ಕೆಡಿಪಿ ಸಭೆಗೂ ಹಾಜರಾಗುವುದಿಲ್ಲ. ವಾರದಲ್ಲಿ ಎರಡು ದಿನ ಕಚೇರಿಗೆ ಭೇಟಿ ನೀಡುತ್ತಾರೆ ಎಂದು ಆಡಳಿತ ಕಾರ್ಯ ವೈಖರಿ ಬಗ್ಗೆ ಅಧ್ಯಕ್ಷರು ತೀವ್ರ ಬೇಸರ ವ್ಯಕ್ತಪಡಿಸಿದರಲ್ಲದೇ ಸಂಬಂಧಪಟ್ಟ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲು ಹಾಗೂ ಸರ್ಕಾರಕ್ಕೆ ಅಧಿಕಾರಿಗಳ ವಿರುದ್ಧ ವರದಿ ಸಲ್ಲಿಸಲು ಜಿಪಂ ಅಧ್ಯಕ್ಷ ಪ್ರಸಾದ್ ಆದೇಶಿಸಿದರು.
ಜಿಪಂ ಸಿಇಒ ಕೆ.ಎ.ದಯಾ ನಂದ್ ಮಾತನಾಡಿ, ವಸತಿ ಯೋಜನೆ ಹಾಗೂ ನರೇಗಾ ಯೋಜನೆ ಪ್ರಗತಿಯಲ್ಲಿ ಗ್ರಾಮಾಂತರ ಜಿಪಂ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿವೆ. ಕೆಲವೊಂದು ಗ್ರಾಮ ಪಂಚಾಯಿತಿಗಳು ಹಾಗೂ ಇಲಾಖೆಗಳು ಅತೀ ಕಡಿಮೆ ಪ್ರಗತಿ ಸಾಧಿಸಿವೆ. ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಿದರೆ ಮೊದಲನೇ ಸ್ಥಾನಗಳಿಸಬಹುದು ಎಂದು ಹೇಳಿದರು.
ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಪಿ.ಎನ್.ಅನಂತಕುಮಾರಿ, ಉಪಕಾರ್ಯದರ್ಶಿ ಕಾಂತ ರಾಜು, ಮುಖ್ಯ ಯೋಜನಾಧಿಕಾರಿ ವಿನುತಾ ರಾಣಿ.ಬಿ, ಮುಖ್ಯ ಲೆಕ್ಕಾಧಿಕಾರಿ ಟಿ.ಆರ್. ಶೋಭಾ ಸೇರಿದಂತೆ ಪರೀಕ್ಷಾರ್ಥ ತಾಲೂಕು ಇಒ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತಿತರರಿದ್ದರು.