Advertisement
ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಕೇಂದ್ರ ಮತ್ತು ರಾಜ್ಯ ಸಚಿವರು ನೀಡಿದ ಅನೇಕ ಭರವಸೆಗಳು ಹುಸಿಯಾಗಿವೆ. ಕಂದಾಯ ಸಚಿವ ಆರ್.ಅಶೋಕ್ ನೀಡಿದ ಅನೇಕ ಭರವಸೆಗಳು ಕಾರ್ಯರೂಪಕ್ಕೆ ಬಂದಿಲ್ಲ ಎಂದರು.
Related Articles
Advertisement
ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಇದರ ಸಂಪೂರ್ಣ ಹೊಣೆಯನ್ನು ಗೃಹ ಸಚಿವರು ಹೊರಬೇಕು. ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರು ತಕ್ಷಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಮಾತನಾಡಿ, ಬೆಂಗಳೂರಿನಲ್ಲಿ ಯುವತಿ ಮೇಲೆ ನಡೆದ ಆ್ಯಸಿಡ್ ದಾಳಿ ಖಂಡನೀಯ. ಆ್ಯಸಿದ್ ದಾಳಿ ನಡೆಸಿದ ಆರೋಪಿಯನ್ನು ತಕ್ಷಣ ಬಂಧಿಸಬೇಕು. ಜೀವನ್ಮರಣ ನಡುವೆ ಹೋರಾಟ ನಡೆಸುತ್ತಿರುವ ಯುವತಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಕುಟುಂಬದವರಿಗೆ ಸರ್ಕಾರಿ ಕೆಲಸ ನೀಡಬೇಕು ಎಂದು ಆಗ್ರಹಿಸಿದರು.
ಮುಖಂಡ ರವೀಶ್ ಬಸಪ್ಪ ಮಾತನಾಡಿ, ಬಿಜೆಪಿಯವರಿಗೆ ಗಣತಂತ್ರದ ಮೇಲೆ ನಂಬಿಕೆಯಿಲ್ಲ, ಭಾಷಾ ವಿಚಾರ ಸಂಬಂಧ ಸಿ.ಟಿ.ರವಿ ಅವರು ವಿರುದ್ಧ ಹೇಳಿಕೆ ನೀಡಿದ್ದು, ಕನ್ನಡ ನಾಡಿನಲ್ಲಿ ಬದುಕಲು ಇಷ್ಟವಿಲ್ಲದಿದ್ದರೆ ಅವರಿಗೆ ಇಷ್ಟವಿರುವಲ್ಲಿ ಬದುಕಲಿ. ಕನ್ನಡ ಭಾಷೆಗೆ ಅವಹೇಳನ ಮಾಡಬಾರದು ಎಂದರು. ಸುದ್ದಿಗೋಷ್ಠಿಯಲ್ಲಿ ಹಿರೇಮಗಳೂರು ಪುಟ್ಟಸ್ವಾಮಿ, ಎಚ್.ಪಿ. ಮಂಜೇಗೌಡ, ತನೂಜ್ ಕುಮಾರ್ ಇದ್ದರು.
ಹುಬ್ಬಳ್ಳಿ ಗಲಭೆಗೆ ಕಾಂಗ್ರೆಸ್ ಕಾರಣವೆಂದು ಸಿ.ಟಿ.ರವಿ ಹೇಳಿಕೆ ನೀಡಿದ್ದು, ಗಲಭೆ ಹುಟ್ಟು ಹಾಕುವುದು ಕಾಂಗ್ರೆಸ್ ಸಿದ್ಧಾಂತವಲ್ಲ. ಬಿಜೆಪಿ ಮತ್ತು ಅಂಗಸಂಸ್ಥೆಗಳವರು ಗಲಭೆ ಹುಟ್ಟು ಹಾಕುವವರು. ಅನ್ಯಧರ್ಮೀಯರಿಗೆ ಜಾತ್ರೆಯಲ್ಲಿ ಅಂಗಡಿ ಹಾಕಬಾರದು. ಹಲಾಲ್, ಆಜಾನ್ ಇವುಗಳ ಬಗ್ಗೆ ಪ್ರಚೋದಿಸಿದ್ದು ಸಿ.ಟಿ.ರವಿ. ಕಾಂಗ್ರೆಸ್ ಬಗ್ಗೆ ಇನ್ನೊಮ್ಮೆ ಹಗುರವಾಗಿ ಮಾತನಾಡಿದರೆ ಹೋರಾಟ ರೂಪಿಸಲಾಗುವುದು. -ಎಚ್.ಎಚ್.ದೇವರಾಜ್