Advertisement

ಅಪರಿಚಿತ ವಾಹನ ಡಿಕ್ಕಿ : ಚಿರತೆ ಸಾವು

04:09 PM Feb 13, 2021 | Team Udayavani |

ಕೊಟ್ಟಿಗೆಹಾರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಮೃತಪಟ್ಟ ಘಟನೆ ಹಾಸನ ಸಮೀಪದ ಉದಯಪುರದಲ್ಲಿ ನಡೆದಿದೆ.

Advertisement

ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಮೂಡಿಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ  ಹೆದ್ದಾರಿಯಲ್ಲಿ ವಾಹನ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡು ಬಿದ್ದಿದ್ದ ಚಿರತೆ ಕಂಡಿದೆ. ಕೂಡಲೇ ಸ್ಥಳೀಯ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಅಧಿಕಾರಿಗಳ ತಂಡ ಚಿರತೆಗೆ ಪ್ರಥಮ ಚಿಕಿತ್ಸೆ ನೀಡಿದೆ. ಆದರೆ ಚಿಕಿತ್ಸೆ ಫಲಿಸದೆ ಕೊನೆಗೂ ಚಿರತೆ ಮೃತಪಟ್ಟಿದೆ.

ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ಸ್ಥಳದಲ್ಲಿದ್ದು ಅನಂತರ ಬೆಂಗಳೂರಿಗೆ ತೆರಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next