Advertisement
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಚಳ್ಳಕೆರೆ ತಾಲೂಕಿನಾದ್ಯಂತ ಆರೋಗ್ಯ, ಪೊಲೀಸ್ ಹಾಗೂ ಇತರೆ ಎಲ್ಲಾ ಇಲಾಖೆಗಳ ಸಿಬ್ಬಂದಿ ಕೊರೊನಾ ವೈರಾಣು ನಿಯಂತ್ರಣಕ್ಕೆ ಕಟ್ಟೆಚ್ಚರದಿಂದ ಕಾರ್ಯನಿರ್ವಹಿಸುತ್ತಿದ್ದು, ಇದುವರೆಗೂ ಯಾವುದೇ ರೀತಿಯ ಕೊರೊನಾ ಸೋಂಕಿತರು ಪತ್ತೆಯಾಗಿಲ್ಲ. ಆದರೂ ಸಹ ಮುಂಜಾಗ್ರತಾ ಕ್ರಮವಾಗಿ ಮಾರುಕಟ್ಟೆ ಆವರಣದಲ್ಲಿ ಜ್ವರ ತಪಾಸಣಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದರಿಂದ ಯಾರೂ ಆತಂಕ ಪಡುವ ಸ್ಥಿತಿ ಉದ್ಭವಿಸದು. ಆರೋಗ್ಯ ಇಲಾಖೆ ಈ ಕೇಂದ್ರದಲ್ಲಿ ಕಾರ್ಯನಿರ್ವಹಿಸುವುದರಿಂದ ಕೊರೊನಾ ನಿಯಂತ್ರಣಕ್ಕೆ ಉಪಯುಕ್ತವಾಗುತ್ತದೆ ಎಂದರು. ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ, ಪೌರಾಯುಕ್ತ ಪಿ.ಪಾಲಯ್ಯ, ನಗರಸಭಾ ಸದಸ್ಯರಾದ ವೈ.ಪ್ರಕಾಶ್, ಶ್ರೀನಿವಾಸ್ರೆಡ್ಡಿ, ಟಿ.ಪ್ರಭುದೇವ್, ಕೃಷ್ಣ ಇದ್ದರು. Advertisement
ಜ್ವರ ತಪಾಸಣಾ ಕೇಂದ್ರಕ್ಕೆ ಶಾಸಕ ಭೇಟಿ
04:35 PM Apr 13, 2020 | Naveen |
Advertisement
Udayavani is now on Telegram. Click here to join our channel and stay updated with the latest news.