Advertisement

ಮಕ್ಕಳ ಮೇಲೆ ಕೋವಿಡ್ ಲಸಿಕೆ ಪ್ರಯೋಗಕ್ಕೆ ಮೈಸೂರಿನ ಚೆಲುವಾಂಬ ಆಸ್ಪತ್ರೆ ಆಯ್ಕೆ

08:09 PM May 28, 2021 | Team Udayavani |

ಮೈಸೂರು: ಭಾರತ್ ಬಯೋಟೆಕ್ ಸಂಸ್ಥೆಯು ಮಕ್ಕಳ ಮೇಲೆ ನಡೆಸಲು ಉದ್ದೇಶಿಸಿರುವ ಕೋವಿಡ್ ಲಸಿಕೆ ಪ್ರಯೋಗಕ್ಕೆ ದೇಶದ ಹತ್ತು ಆಸ್ಪತ್ರೆಗಳ ಪೈಕಿ ಮೈಸೂರಿನ ಚೆಲುವಾಂಬ ಆಸ್ಪತ್ರೆಯನ್ನೂ ಆಯ್ಕೆ ಮಾಡಲಾಗಿದೆ.

Advertisement

ಕೋವಿಡ್ -19 3ನೇ ಅಲೆ ಮಕ್ಕಳ ಮೇಲೆ ದುಷ್ಪರಿಣಾಮ ಬೀರಲಿರುವ ಹ್ನಿಿನೆಲೆ ಮಕ್ಕಳಲ್ಲಿ ರೋಗನಿರೋ‘ಕ ಶಕ್ತಿಯನ್ನು ಹೆಚ್ಚಿಸುವ ಸಲುವಾಗಿ ಲಸಿಕೆ ಪರಿಣಾಮ ಬೀರಲಿದೆಯೇ ಎಂಬುದನ್ನು ತಿಳಿಯಲು ಭಾರತ್ ಬಯೋಟೆಕ್ ಸಂಸ್ಥೆಯು ಕೋವ್ಯಾಕ್ಸಿನ್ ಲಸಿಕೆಯನ್ನು ಉತ್ಪಾಾದಿಸುತ್ತಿದ್ದು, ಮಕ್ಕಳ ಮೇಲೆ ಲಸಿಕೆ ಪ್ರಯೋಗ ಮಾಡಲು ದೇಶದಲ್ಲಿ 10 ಆಸ್ಪತ್ರೆಗಳನ್ನು ಆಯ್ಕೆ ಮಾಡಿಕೊಂಡಿದ್ದು, ಇದರಲ್ಲಿ ಮೈಸೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಾದ ಚೆಲುವಾಂಬ ಆಸ್ಪತ್ರೆಯನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ :ಹುಣಸೂರಿನಲ್ಲಿ 20 ಹಾಸಿಗೆಗಳ ತಾತ್ಕಾಲಿಕ ಆಸ್ಪತ್ರೆ ಆರಂಭ : ಸಂಸದ ಪ್ರತಾಪ ಸಿಂಹ

ಲಸಿಕೆಯ ಕ್ಲಿನಿಕಲ್ ಟ್ರಯಲ್‌ನಲ್ಲಿ ಎರಡು ಭಾಗಗಳಿದ್ದು, ಮೊದಲ ಭಾಗವಾಗಿ 12 ರಿಂದ 18 ವರ್ಷದ ಒಳಪಟ್ಟವರಿಗೆ ಲಸಿಕೆಯನ್ನು ಪ್ರಯೋಗ ಮಾಡಲಾಗುತ್ತದೆ. ಎರಡನೇ ಭಾಗವಾಗಿ 8ರಿಂದ 12 ವರ್ಷದ ಮಕ್ಕಳಿಗೆ ಲಸಿಕೆಯ ಪ್ರಯೋಗ ನಡೆಯಲಿದ್ದು, ಜೂನ್ ಮೊದಲ ವಾರದಲ್ಲಿ ಇದು ಆರಂಭವಾಗಲಿದೆ. ಪ್ರಾಾಯೋಗಿಕ ಕ್ಲಿನಿಕಲ್ ಟೆಸ್ಟ್ಗಾಗಿ ಆಸ್ಪತ್ರೆಯಲ್ಲಿ ಸಿದ್ಧತೆ ನಡೆಯುತ್ತಿದೆ ಎಂದು ಮೈಸೂರು ವೈದ್ಯಕೀಯ ಮಹಾವಿದ್ಯಾಾಲಯದ ಆರ್‌ಎಂಓ ಡಾ. ಚೇತನ್ ಕುಮಾರ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next