Advertisement

Heavy rain: ಚೆಲ್ಯಡ್ಕ ಸೇತುವೆ ಮುಳುಗಡೆ, ವಾಹನ ಸಂಚಾರ ಸ್ಥಗಿತ

09:56 AM Jul 06, 2023 | Team Udayavani |

ಬೆಟ್ಟಂಪಾಡಿ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದಿನ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಜು.6ರ ಗುರುವಾರ ಮುಂಜಾನೆ ಮುಳುಗಡೆಯಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸಂಚರಿಸುತ್ತಿದೆ.

Advertisement

ಪ್ರಥಮ ಬಾರಿಗೆ ಮುಳುಗಡೆ

ಮುಳುಗು ಸೇತುವೆ ಎಂದು ಪ್ರಖ್ಯಾತಿ  ಪಡೆದಿರುವ ಚೆಲ್ಯಡ್ಕ ಸೇತುವೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪ್ರಥಮ ಬಾರಿಗೆ ಮುಳುಗಡೆಯಾಗಿದೆ. ಲೋಕೋಪಯೋಗಿ ಇಲಾಖೆಯ ಮೂಲಕ ಸರ್ವಋತು ಸೇತುವೆ ನಿರ್ಮಾಣ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದರೂ, ಮನವಿ ಸಲ್ಲಿಸಿದರೂ ಜನಪ್ರತಿನಿಧಿಗಳು ಅಧಿಕಾರಿಗಳಲ್ಲಿ ಇಚ್ಛಾ ಶಕ್ತಿಯ ಕೊರತೆ ಎದ್ದು ಕಾಣುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next