Advertisement

ಚೆಂಬೂರು ಕರ್ನಾಟಕ ಸಂಘ ಹೈಸ್ಕೂಲಿಗೆ ಶೇ. 100 ಫಲಿತಾಂಶ

04:30 PM Jul 06, 2019 | Team Udayavani |

ಮುಂಬಯಿ: 2018-19ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಚೆಂಬೂರು ಕರ್ನಾಟಕ ಸಂಘ ಸಂಚಾಲಕತ್ವದ ಚೆಂಬೂರು ಕರ್ನಾಟಕ ಹೈಸ್ಕೂಲಿನ ಕನ್ನಡ ಮಾಧ್ಯಮಕ್ಕೆ ಶೇ. 100 ಫಲಿತಾಂಶ ಲಭಿಸಿದೆ.

Advertisement

ಸಂಘವು ಕಳೆದ ಐದು ದಶಕಗಳಿಂದ ಚೆಂಬೂರು ಪರಿಸರದ ಮಕ್ಕಳಿಗೆ ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮದ ಮುಖಾಂತರ ಶಿಕ್ಷಣವನ್ನು ನೀಡುತ್ತಿದ್ದು, ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ 31 ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿ¨ªಾರೆ. ಕನ್ನಡ ಮಾಧ್ಯಮದಲ್ಲಿ ಐಶ್ವರ್ಯ ಗೌಡ ಅವರು ಶೇ. 79.60 ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು ಗಳಿಸಿ¨ªಾರೆ. ಸೋನಾಲಿ ಪೋಲ್‌ ಅವರು ಶೇ. 74.60 ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನವನ್ನು ಹಾಗೂ ರೂಪಾ ಕುರಾಡೆ ಅವರು ಶೇ. 68.20 ರಷ್ಟು ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿ¨ªಾರೆ.

ಇಂಗ್ಲಿಷ್‌ ಮಾಧ್ಯಮದಲ್ಲಿ ಮಾನಸಿ ಪಟೇಲ್‌ ಅವರು ಶೇ. 93.60 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನವನ್ನು, ಪಾಯಲ್‌ ಪಚಾರ್ಕರ್‌ ಅವರು ಶೇ. 92.60 ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು ಮತ್ತು ಶ್ರೀನಿಧಿ ಪೂಜಾರಿ ಅವರು ಶೇ. 91.80 ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದಿ¨ªಾರೆ. ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬಂದಿಗಳನ್ನು ಚೆಂಬೂರು ಕರ್ನಾಟಕ ಸಂಘದ ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ಅಭಿನಂದಿಸಿ¨ªಾರೆ.

Advertisement

Udayavani is now on Telegram. Click here to join our channel and stay updated with the latest news.

Next