Advertisement
ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.
ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ ಸಮಸ್ಯೆ ಗಳಿಗೂ ಕಾರಣವಾಗುತ್ತದೆ. ನಿರ್ಲಕ್ಷಿಸಿದರೆ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ತಜ್ಞರು ಹೇಳುವುದೇನು?
ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಿಂದ ಅಲರ್ಜಿ (ಬಿಂದಿ ಡರ್ಮಟೈಟಿಸ್) ಉಂಟಾಗುವ ಸಾಧ್ಯತೆ ಇದೆ. ಇದರಿಂದ ಕುಂಕುಮ ಹಚ್ಚಿ ಕೊಂಡ ಭಾಗದಲ್ಲಿ ಕೆರೆತ, ಸಣ್ಣ ನೀರಿನ ಗುಳ್ಳೆ ಕಾಣಿಸಿಕೊಳ್ಳಬಹುದು. ಇಂತಹ ಕುಂಕುಮಗಳಿಂದ ಜೀವಕಣ ಗಳು ನಾಶವಾಗಿ ಕ್ರಮೇಣ ಆ ಭಾಗ ಬೆಳ್ಳಗಾಗಲಿದೆ ಎಂದು ಚರ್ಮರೋಗ ತಜ್ಞರು ಹೇಳುತ್ತಾರೆ.
Related Articles
– ಕೋಟ ಶ್ರೀನಿವಾಸ ಪೂಜಾರಿ, ಮುಜರಾಯಿ ಸಚಿವ
Advertisement