ನವದೆಹಲಿ: ಮೈಚಾಂಗ್ ಚಂಡಮಾರುತ ಸೋಮವಾರ ತಮಿಳುನಾಡಿನ ಕರಾವಳಿ ಪ್ರದೇಶಗಳತ್ತ ಮುನ್ನುಗ್ಗುತ್ತಿದ್ದು ಪರಿಣಾಮ ಚೆನ್ನೈ ಸುತ್ತ ಮುತ್ತ ಭಾರಿ ಮಳೆಯಾಗುತ್ತಿದೆ.
ಇದರ ಪರಿಣಾಮ ಚೆನ್ನೈ ವಿಮಾನ ನಿಲ್ದಾಣದಲ್ಲಿ ಮಳೆ ನೀರಿನಿಂದ ಆವರಿಸಿದ್ದು ಈ ಭಾಗದ ಹಲವಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ಭಾರಿ ಮಳೆಯಿಂದ ವಿಮಾನ ನಿಲ್ದಾಣದ ರನ್ ವೇ, ಪಾರ್ಕಿಂಗ್ ಪ್ರದೇಶ ಸಂಪೂರ್ಣ ಜಲಾವೃತವಾಗಿದೆ. ಕೆಲವೊಂದು ವಿಮಾನಗಳನ್ನು ರದ್ದುಗೊಳಿಸಲಾಗಿದ್ದು, ಇನ್ನು ಕೆಲವು ವಿಮಾನಗಳ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ.
ತಮಿಳುನಾಡು ಮತ್ತು ಆಂಧ್ರಪ್ರದೇಶ ಕರಾವಳಿಯ ಸಮೀಪ ಮೈಚಾಂಗ್ ಚಂಡಮಾರುತವು ಸಮೀಪಿಸುತ್ತಿರುವ ಕಾರಣ ಸೋಮವಾರ ರಾತ್ರಿಯಿಡೀ ಚೆನ್ನೈನಲ್ಲಿ ಭಾರೀ ಮಳೆ ಸುರಿದಿದೆ. ಭಾರತ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ನಗರ ಮತ್ತು ಅದರ ನೆರೆಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.