ಚೆನ್ನೈ: ಶನಿವಾರ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂವರು ಮಹಿಳಾ ಪ್ರಯಾಣಿಕರಿಂದ 34.76 ಲಕ್ಷ ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿಯನ್ನು ಕಸ್ಟಮ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮೂವರು ಮಹಿಳಾ ಪ್ರಯಾಣಿಕರು – ತಿರುಚ್ಚಿಯ ಲಕ್ಷ್ಮಿ (35) ಮತ್ತು ಕನಕವಲ್ಲಿ (29) ಮತ್ತು ದಿಂಡಿಗಲ್‌ನ ಮರಿಯಮ್ಮಲ್ (39) ಶ್ರೀಲಂಕಾಕ್ಕೆ ಪ್ರಯಾಣಿಸುತ್ತಿದ್ದರು ಹಾಗು ಅವರು ಚೆನ್ನೈನಿಂದ ಶ್ರೀಲಂಕಾಗೆ ಹಣವನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಪ್ತಚರ ಮಾಹಿತಿಯ ಆಧಾರದ ಮೇಲೆ, ವಿಮಾನದಲ್ಲಿದ್ದ ಪ್ರಯಾಣಿಕರನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮೇಲ್ವಿಚಾರಣೆ ಮಾಡಿದರು ಮತ್ತು ಶಂಕಿತ ಪ್ರಯಾಣಿಕರನ್ನು ನಿಲ್ಲಿಸಿ ಪರಿಶೀಲಿಸಿದರು.
ಮೂವರು ಮಹಿಳೆಯರ ಮೇಲೆ ಅನುಮಾನಗೊಂಡ ವಿಮಾನ ನಿಲ್ದಾಣದ ಅಧಿಕಾರಿಗಳು ಅವರ ಲಗೇಜ್‌ಗಳನ್ನು ಪರಿಶೀಲಿಸಿದರು, ನಂತರ ಮಹಿಳಾ ಕಸ್ಟಮ್ಸ್ ಅಧಿಕಾರಿಗಳು ಅವರನ್ನು ಪ್ರತ್ಯೇಕ ಕೋಣೆಗೆ ಕರೆದೊಯ್ದು ತಪಾಸಣೆ ನಡೆಸಿದರು.
ಮೂವರು ಮಹಿಳಾ ಪ್ರಯಾಣಿಕರಿಂದ 34.76 ಲಕ್ಷ ರೂಪಾಯಿ ಮೌಲ್ಯದ ಅಮೆರಿಕನ್ ಡಾಲರ್ ಜಪ್ತಿ ಮಾಡಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.