ಚೆನ್ನೈ: ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ಚೆನ್ನೈನಲ್ಲಿ ಒಂದೇ ದಿನದಲ್ಲಿ ಬರೋಬ್ಬರಿ 20 ಸೆಂ.ಮೀ ಮಳೆಯಾಗಿದ್ದು, ಚೆನ್ನೈ, ತಿರುವಳ್ಳೂರ್, ಕಾಂಚಿಪುರಂ ಹಾಗೂ ಚೆಂಗಲ್ ಪಟ್ಟುವಿನಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಈ ಆಟಗಾರ ಟೀಂ ಇಂಡಿಯಾದಲ್ಲಿ ‘ಅದ್ಭುತ’ ಸೃಷ್ಟಿಸಲಿದ್ದಾನೆ: ಚೇತನ್ ಶರ್ಮಾ
ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದರಿಂದ ಕೇವಲ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ನಾಲ್ಕು ಜಿಲ್ಲೆಗಳಲ್ಲಿನ ಶಾಲಾ, ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಭಾರೀ ಮಳೆಯಿಂದಾಗಿ ವಿದ್ಯುತ್ ಶಾಕ್ ತಗುಲಿ ಮೂವರು ಸಾವನ್ನಪ್ಪಿದ್ದಾರೆ. ಧಾರಾಕಾರ ಮಳೆಯಿಂದಾಗಿ ರಸ್ತೆಗಳು, ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ ಎಂದು ವರದಿ ತಿಳಿಸಿದೆ.
ನದಿಪಾತ್ರಗಳ ಸಮೀಪ ಇವರು ಜನರಿಗೆ ಮುನ್ಸೂಚನೆ ನೀಡಲಾಗಿದ್ದು, ಅವರನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪ್ರವಾಹ ನಿಯಂತ್ರಣ ಕಚೇರಿಗೆ ಭೇಟಿ ನೀಡಿದ್ದು, ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚನೆ ನೀಡಿರುವುದಾಗಿ ವರದಿ ಹೇಳಿದೆ.