ಬೆಂಗಳೂರು: ಪ್ಲಾಸ್ಟಿಕ್ ನಿಷೇಧ ನಿಯಮಗಳನ್ನು ಚೆನ್ನೈ ಮಾದರಿಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಬಿಬಿಎಂಪಿ ಮುಂದಾಗಿದ್ದು, ಆರೋಗ್ಯ ಅಧಿಕಾರಿಗಳ ತಂಡವನ್ನು ಅಧ್ಯಯನಕ್ಕಾಗಿ ಚೆನ್ನೈಗೆ ಕಳುಹಿಸಲು ಸಜ್ಜಾಗಿದೆ.
ರಾಜ್ಯಾದ್ಯಂತ 40 ಮೈಕ್ರಾನ್‌ಗಿಂತ ಕಡಿಮೆ ಗುಣಮಟ್ಟದ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಆದರೂ, ಬಿಬಿಎಂಪಿ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾತ್ರ ನಿಂತಿಲ್ಲ. ಹೀಗಾಗಿಯೇ ಬಿಬಿಎಂಪಿ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದಲ್ಲಿ ಶೇ. 10ಕ್ಕೂ ಹೆಚ್ಚು ಭಾಗ ಪ್ಲಾಸ್ಟಿಕ್ ತ್ಯಾಜ್ಯವಾಗಿದ್ದು, ಅದರ ಸಂಸ್ಕರಣೆ ಕಷ್ಟವಾಗುತ್ತಿದೆ.
ಹೀಗಾಗಿ ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಾಗಿ ಜಾರಿಗೆ ಮುಂದಾಗಿರುವ ಬಿಬಿಎಂಪಿ ಬೇರೆ ನಗರಗಳಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಅಧ್ಯಯನ ನಡೆಸಲು ನಿರ್ಧರಿಸಿದೆ. ಪ್ಲಾಸ್ಟಿಕ್ ನಿಷೇಧವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಚೆನ್ನೈ ಮಹಾನಗರ ಪಾಲಿಕೆ ಯಶಸ್ವಿಯಾಗಿದೆ.
ಅದರಂತೆ ಚೆನ್ನೈ ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಆ ಹಿನ್ನೆಲೆಯಲ್ಲಿ ಅಲ್ಲಿನ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳ ಹಾಗೂ ಅನುಷ್ಠಾನ ಮಾದರಿಯ ಅಧ್ಯಯನಕ್ಕಾಗಿ ಪಾಲಿಕೆಯ ಅಧಿಕಾರಿಗಳು ಅಲ್ಲಿಗೆ ತೆರಳಲು ಮುಂದಾಗಿದ್ದಾರೆ.
ಆರೋಗ್ಯ ವಿಭಾಗದ ಐವರು ಅಧಿಕಾರಿಗಳು 10 ದಿನದಲ್ಲಿ ಚೆನ್ನೆ$„ಗೆ ತೆರಳಿ ಅಲ್ಲಿನ ಕ್ರಮಗಳ ಬಗ್ಗೆ ಮಾಹಿತಿ ಪಡೆದು, ವರದಿ ಸಿದ್ಧಪಡಿಸಲಿದ್ದಾರೆ. ಆನಂತರ ಅಲ್ಲಿನ ಮಾದರಿಯನ್ನು ಇಲ್ಲೂ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ನಿಷೇಧಿತ ಪ್ಲಾಸ್ಟಿಕ್ ಬಳಕೆ ಮೇಲೆ ಕಡಿವಾಣ ಹಾಕಲು ಚೆನ್ನೆ$„ನಲ್ಲಿ ಕೈಗೊಂಡಿರುವ ಕ್ರಮಗಳ ಅನುಷ್ಠಾನಗೊಳಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಅದಕ್ಕಾಗಿ ಚೆನ್ನೆ$„ಗೆ ಅಧಿಕಾರಿಗಳು ತೆರಳಿ, ಅಲ್ಲಿ ಕೈಗೊಂಡಿರುವ ಕ್ರಮಗಳ ಮಾಹಿತಿ ಪಡೆದು, ವರದಿ ಸಿದ್ಧಪಡಿಸಲಿದ್ದಾರೆ. ಆನಂತರ ಅದನ್ನು ಬೆಂಗಳೂರಿನಲ್ಲೂ ಅನುಷ್ಠಾನಗೊಳಿಸಲಾಗುವುದು.
-ಗಂಗಾಂಬಿಕೆ, ಮೇಯರ್