ಚೆನ್ನೈ : ತಮಿಳುನಾಡಿನ ಹಲವು ಭಾಗಗಳಲ್ಲಿ ಭೀಕರ ಬರಗಾಲ ಕಾಣಿಸಿಕೊಂಡಿದ್ದು ನೀರಿಗಾಗಿ ಹಾಹಾಕಾರ ಉಂಟಾಗಿದೆ. ಅತ್ಯಂತ ಕೆಟ್ಟ ಸ್ಥಿತಿಯನ್ನುರಾಜ್ಯ ಎದುರಿಸುತ್ತಿದೆ. ಚೆನ್ನೈ ನಗರದಲ್ಲಿ ಟ್ಯಾಂಕರ್‌ಗಳಲ್ಲಿ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು ಟೋಕನ್‌ಗಳನ್ನು ನೀಡಿ ವಿತರಿಸಲಾಗುತ್ತಿದೆ.
ರಾಜ್ಯದಲ್ಲಿ ಭೀಕರ ಜಲಕ್ಷಾಮ ಎದುರಾಗಿದ್ದು ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರದತ್ತ ಚಾಟಿ ಬೀಸಿದೆ.
ಇನ್ನೊಂದೆಡೆ ಎಐಡಿಎಂಕೆ ಸರ್ಕಾರದ ವಿರುದ್ಧ ವಿಪಕ್ಷ ಡಿಎಂಕೆ ಪ್ರತಿಭಟನೆ ನಡೆಸುತ್ತಿದೆ.
ಈ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ. ಮಳೆಯ ಅಭಾವದ ನಡುವೆಯೂ ನಮ್ಮಿಂದ ಸಾಧ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಂಡು ಜನರಿಗೆ ನೀರು ವಿತರಿಸುತ್ತಿದ್ದೇವೆ. ರಾಜಕೀಯ ಮಾಡುವುದು ತಪ್ಪಾಗುತ್ತದೆ ಎಂದು ಸಚಿವ ಡಿ.ಜಯಕುಮಾರ್ ಹೇಳಿಕೆ ನೀಡಿದ್ದಾರೆ.
ಈಗಾಗಲೇ ಚೆನ್ನೈನಲ್ಲಿ ಐಟಿ ಕಂಪೆನಿಗಳಿಗೆ ನೀರಿಲ್ಲದ ಕಾರಣಕ್ಕಾಗಿ ರಜೆ ಸಾರಲಾಗಿದ್ದು, ಹಲವು ಕಂಪೆನಿಗಳು ಮನೆಯಿಂದಲೆ ಕೆಲಸಮಾಡುವಂತೆ ಉದ್ಯೋಗಿಗಳಿಗೆ ಸಲಹೆ ನೀಡಿದೆ.
ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ , ನೀರು ಸರಬರಾಜು ಮಾಡುಲು ಬೇಕಾಗಿರುವ ಎಲ್ಲಾ ಅಗತ್ಯ ಕ್ರಮಗಳನ್ನುನಾವು ಕೈಗೊಂಡಿದ್ದೇವೆ ಎಂದಿದ್ದಾರೆ. ಮಾಧ್ಯಮಗಳು ಅನಗತ್ಯ ಗೊಂದಲ ಸೃಷ್ಟಿಸುತ್ತಿವೆ ಎಂದು ಆರೋಪಿಸಿದ್ದಾರೆ.
ಅಕ್ಟೋಬರ್‌ನಲ್ಲಿ ಈಶಾನ್ಯ ಮಾನ್ಸೂನ್ ಬರುವವರೆಗೆ ನಾವು ಭೂಜಲವನ್ನೆ ಅವಲಂಬಿಸಬೇಕಾಗಿದೆ ಎಂದು ತಿಳಿಸಿದ್ದಾರೆ.