Advertisement

Heavy Rain: ಭಾರಿ ಮಳೆಗೆ ತತ್ತರಿಸಿದ ಚೆನ್ನೈ, ಹಿಮಾಚಲ ಪ್ರದೇಶ, ಜನ ಜೀವನ ಅಸ್ತವ್ಯಸ್ತ

08:24 AM Aug 14, 2023 | Team Udayavani |

ನವದೆಹಲಿ: ಮಳೆರಾಯ ಮತ್ತೆ ತನ್ನ ರೌದ್ರಾವತಾರ ತೋರಿದ್ದಾನೆ, ಭಾನುವಾರ ಸಂಜೆಯಿಂದ ಸುರಿದ ಭಾರಿ ಮಳೆಗೆ ಚೆನ್ನೈ ಮತ್ತು ಹಿಮಾಚಲಪ್ರದೇಶ ತತ್ತರಿಸಿ ಹೋಗಿದೆ, ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.

Advertisement

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಶಿಮ್ಲಾ, ಮಂಡಿ, ಸಿರ್ಮೌರ್ ಸೇರಿದಂತೆ ಇತರ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುತ್ತಿದ್ದು ಪರಿಣಾಮ ಹಿಮಾಚಲ ಪ್ರದೇಶದಾದ್ಯಂತ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.

ಚೆನ್ನೈ ನಗರದಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲದೆ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಚೆನ್ನೈನ ಬಿಲಾಸ್‌ಪುರ್, ಚಂಬಾ, ಹಮೀರ್‌ಪುರ್, ಕಂಗ್ರಾ, ಕುಲು, ಮಂಡಿ, ಶಿಮ್ಲಾ, ಸಿರ್ಮೌರ್, ಸೋಲನ್, ಉನಾ, ಕಿನ್ನೌರ್‌ನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು. , ಲಾಹೌಲ್, ಸ್ಪಿತಿ ಸೇರಿದಂತೆ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಬೀಸುವ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Advertisement

ಇದನ್ನೂ ಓದಿ: Sale of Property: ಆಸ್ತಿ ಮಾರಾಟದಿಂದ ಬಂದ ಹಣದ ವಿಚಾರದಲ್ಲಿ ಮನಸ್ತಾಪ, ಕೊಲೆಯಲ್ಲಿ ಅಂತ್ಯ

Advertisement

Udayavani is now on Telegram. Click here to join our channel and stay updated with the latest news.

Next