Advertisement

ರಾಜೀವ್ ಗಾಂಧಿ ಸರಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ : ರೋಗಿಗಳ ಸ್ಥಳಾಂತರ

03:30 PM Apr 27, 2022 | Team Udayavani |

ಚೆನ್ನೈ : ರಾಜೀವ್ ಗಾಂಧಿ ಸರಕಾರಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದೆ.

Advertisement

ಆಸ್ಪತ್ರೆಯ ಹಳೆ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಕೂಡಲೇ ಅಲ್ಲಿದ್ದ ರೋಗಿಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿ ಅವರಿಸಿಕೊಂಡಾಗ ಆಸ್ಪತ್ರೆಯಲ್ಲಿ 33 ರೋಗಿಗಳು ಇದ್ದರು ಎನ್ನಲಾಗಿದ್ದು ಅವರೆಲ್ಲರನ್ನು ಕೂಡಲೇ ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗಿದೆ.

ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ಅನಾವಶ್ಯಕ ನಿರ್ಬಂಧ ಹೇರದಂತೆ ಪ್ರಧಾನಿ ಸೂಚಿಸಿದ್ದಾರೆ : ಸಿಎಂ ಬೊಮ್ಮಾಯಿ

Advertisement

Advertisement

Udayavani is now on Telegram. Click here to join our channel and stay updated with the latest news.

Next