ಚನ್ನಮ್ಮನ ಕಿತ್ತೂರು: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು ಕಿತ್ತೂರು ತಾಲೂಕಿನ ಪರಸನಟ್ಟಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಚನ್ನಮ್ಮನ ಕಿತ್ತೂರು ತಾಲೂಕಿನ ದೇಗಾಂವ ಗ್ರಾಮದ ನರೇಶ ಯಲ್ಲಪ್ಪ ಅಗಸರ (28) ನ.23ರ ಶನಿವಾರ ಸಂಜೆ ಪರಸನಟ್ಟಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಐದು ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕಳೆದ 20 ದಿನಗಳ ಹಿಂದೆ ರಜೆಯ ಮೇಲೆ ಸ್ವಗ್ರಾಮ ಕಿತ್ತೂರು ತಾಲೂಕಿನ ದೇವಗಾಂವ ಗ್ರಾಮಕ್ಕೆ ಬಂದಿದ್ದರು. ರಜೆ ಮುಗಿದು ನಾಳೆ (ನ. 24) ಮರಳಿ ಸೇನಾ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಆದರೆ, ಈಗ ಇಹಲೋಕವನ್ನೇ ತ್ಯಜಿಸಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹದ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಕಿತ್ತೂರು ಪಿಎಸ್ಐ ಪ್ರವೀಣ ಗಂಗೋಳ ಪ್ರವೀಣ ಕೋಟಿ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.