Advertisement
ದೆಹಲಿ ಭೇಟಿ ಬಳಿಕ ಚನ್ನಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯ ಹಿರಿಯ ಮುಖಂಡರ ಜೊತೆ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿದ್ದೇನೆ. ನಮ್ಮ ಪಕ್ಷದ ನಾಯಕರು ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದಾರೆ. ಕ್ಷೇತ್ರವನ್ನು ಜೆಡಿಎಸ್ ಉಳಿಸಿಕೊಂಡರೂ ಪರವಾಗಿಲ್ಲ. ನನ್ನ ಪಕ್ಷ ನಿಷ್ಠೆ ಅಚಲವಾಗಿದೆ ಎಂದು ತಿಳಿಸಿದರು.
ಕೇಂದ್ರ ಸಚಿವ ಕುಮಾರಸ್ವಾಮಿ ಅವರೇ ಜೆಡಿಎಸ್‌ಗೆ ಟಿಕೆಟ್ ತಕೊಂಡ್ರೆ ನಾನು ಕೆಲಸ ಮಾಡ್ತೇನೆ. ನಾನು ಹಾಗೂ ನಮ್ಮ ಕಾರ್ಯಕರ್ತರು ಅವರ ಪರವಾಗಿ ಕೆಲಸ ಮಾಡ್ತೇವೆ. ವರಿಷ್ಠರು ಯಾವುದೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ನಾನು ಬದ್ಧನಾಗಿರುತ್ತೇನೆ. ಮುಂದೆ ಅವಕಾಶ ಬರುತ್ತಿರುತ್ತೆ ಕಾದು ನೋಡೋಣ ಎಂದು ಮಾರ್ಮಿಕವಾಗಿ ನುಡಿದರು.
Related Articles
Advertisement
ಸರ್ಕಾರ ಏನೂ ಬೇಕಾದರೂ ಆಗಬಹುದು: ಸಿಪಿವೈ ಭವಿಷ್ಯನೀನು ಆತುರ ಪಡಬೇಡ, ಪಕ್ಷ ಬಿಡಬೇಡ ಎಂದು ಹೈಕಮಾಂಡ್ ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಹಾಗಾಗಿ, ಪಕ್ಷದ ಆದೇಶ ಮೀರಿ ಹೋಗಬಾರದು ಅಂತ ಅನಿಸುತ್ತಿದೆ. ಈಗಾಗಲೇ ಅತಂತ್ರದತ್ತ ಸಾಗಿರುವ ಕಾಂಗ್ರೆಸ್ ಸರ್ಕಾರ ಏನು ಬೇಕಾದರೂ ಆಗಬಹುದು. ಉಪಚುನಾವಣೆ ಬಳಿಕ ಸರ್ಕಾರ ಇರುತ್ತಾ, ಇರಲ್ವಾ ಅಂತ ಗೊತ್ತಿಲ್ಲ. ಸರ್ಕಾರ ಹಗರಣಗಳಲ್ಲಿ ನಲುಗುತ್ತಿದೆ. ಈ ಸಂದರ್ಭದಲ್ಲಿ ಈ ಚುನಾವಣೆ ಗೆಲ್ಲಬೇಕು ಎನ್ನುವ ಹಠ ಮೈತ್ರಿ ಪಕ್ಷಗಳಲ್ಲಿದೆ ಎಂದು ಸಿ.ಪಿ.ಯೋಗೇಶ್ವರ್ ಹೇಳಿದರು.