ಮುಂಬೈ: ಭಾರತ ತಂಡದಿಂದ ಕೈಬಿಡಲ್ಪಟ್ಟ ನಂತರ ಚೇತೇಶ್ವರ ಪೂಜಾರ ದೇಶೀಯ ಕ್ರಿಕೆಟ್ ಗೆ ಮರಳಿದ್ದಾರೆ. ಮುಂಬರುವ ದುಲೀಪ್ ಟ್ರೋಫಿಯಲ್ಲಿ ಅವರು ಪಶ್ಚಿಮ ವಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪಂದ್ಯಾವಳಿಯನ್ನು ನೇರವಾಗಿ ಆಡಲು ಒಪ್ಪಿಕೊಂಡಿದ್ದಾರೆ.
ಪೂಜಾರ ಜೊತೆಗೆ ಭಾರತದ ಮತ್ತೊಬ್ಬ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪಶ್ಚಿಮ ವಲಯ ತಂಡದಲ್ಲಿ ಸೇರ್ಪಡೆಯಾಗಲಿದ್ದಾರೆ. ಅಂತರ ವಲಯ ಸ್ಪರ್ಧೆಯು ಜೂನ್ 28 ರಂದು ಬೆಂಗಳೂರಿನಲ್ಲಿ ಪ್ರಾರಂಭವಾಗಲಿದೆ.
ವೆಸ್ಟ್ ಇಂಡೀಸ್ ಟೆಸ್ಟ್ ಪ್ರವಾಸಕ್ಕೆ ಆಯ್ಕೆಯಾಗಿರುವ ಋತುರಾಜ್ ಗಾಯಕ್ವಾಡ್ ಮತ್ತು ಯಶಸ್ವಿ ಜೈಸ್ವಾಲ್ ಬದಲಿಗೆ ಪೂಜಾರ ಮತ್ತು ಯಾದವ್ ಆಯ್ಕೆಯಾಗಿದ್ದಾರೆ. ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನ ಸಂಜಯ್ ಪಟೇಲ್ ನೇತೃತ್ವದ ಪಶ್ಚಿಮ ವಲಯ ಆಯ್ಕೆ ಸಮಿತಿಯು ಇತರ ಸಮಿತಿಯ ಸದಸ್ಯರಿಗೆ ಅವರ ಸೇರ್ಪಡೆಯ ಬಗ್ಗೆ ಮಾಹಿತಿ ನೀಡಿದೆ.
ಇದನ್ನೂ ಓದಿ:opposition meeting ಭಾಗಿಯಾಗದ ಬಿಜೆಡಿ ವಿರುದ್ಧ ಆಕ್ರೋಶ ಹೊರ ಹಾಕಿದ ಕಾಂಗ್ರೆಸ್
ಮುಂಬರುವ ವೆಸ್ಟ್ ಇಂಡೀಸ್ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ ಅವರನ್ನು ಕೈ ಬಿಡಲಾಗಿದೆ. ಅವರ ಬದಲಿಗೆ ಋತುರಾಜ್ ಗಾಯಕ್ವಾಡ್ ಮತ್ತು ಯಶಸ್ವಿ ಜೈಸ್ವಾಲ್ ಅವರನ್ನು ಆಯ್ಕೆ ಮಾಡಲಾಗಿದೆ.
ಭಾರತ ತಂಡವು 2023-25ರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಋತುವನ್ನು ವೆಸ್ಟ್ ಇಂಡೀಸ್ ಸರಣಿಯೊಂದಿಗೆ ಆರಂಭಿಸಲಿದೆ. ವೆಸ್ಟ್ ಇಂಡೀಸ್ ವಿರುದ್ಧಭಾರತ ತಂಡವು ಎರಡು ಟೆಸ್ಟ್ ಪಂದ್ಯವಾಡಲಿದೆ.