ಮಡಿಕೇರಿ : ಚೆಟ್ಟಳ್ಳಿ ಪ್ರೌಢಶಾಲೆಯ ಸಮೀಪದಲ್ಲಿರುವ ಶ್ರೀ ಗಣಪತಿ ದೇವಾಲಯಕ್ಕೆ ಕಳ್ಳರು ನುಗ್ಗಿದ್ದು, ಹುಂಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ.
ಮಂಗಳವಾರ ಬೆಳಗ್ಗೆ ದೇವಾಲಯ ಸಮಿತಿಯ ಅಧ್ಯಕ್ಷ ಮುಳ್ಳಂಡ ರತ್ತು ಚಂಗಪ್ಪ ಅವರು ಪೂಜೆ ಸಲ್ಲಿಸಲು ಆಗಮಿಸಿದಾಗ ದೇವಾಲಯದ ಬಾಗಿಲಿನ ಬೀಗ ಮುರಿದಿರುವುದು ಕಂಡು ಬಂದಿದೆ.
ಚೆಟ್ಟಳ್ಳಿ ಪೋಲಿಸ್ ಉಪಠಾಣೆಗೆ ಮಾಹಿತಿ ನೀಡಿದ ಅನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ಕಳ್ಳರು ಹುಂಡಿಯ ಬೀಗವನ್ನು ಮುರಿದು ಸುಮಾರು 5 ಸಾವಿರ ರೂ.ಗಳಷ್ಟು ಹಣವನ್ನು ದೋಚಿರುವುದು ಕಂಡು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ: ವಸತಿ ಶಾಲೆ ಹಾಸ್ಟೆಲ್‌ನ ನೂರಾರು ಮಕ್ಕಳು ದಿಢೀರ್ ಅಸ್ವಸ್ಥ