ಛತ್ತೀಸ್‌ಗಡ: ಪತ್ನಿ 18 ವರ್ಷಕ್ಕಿಂತ ಮೇಲ್ಪಟ್ಟಿದ್ದರೆ ಪತಿ ಆಕೆಯ ಜತೆಗೆ ಬಲವಂತವಾಗಿ ಲೈಂಗಿಕ ಸಂಪರ್ಕ ಹೊಂದಿದರೆ ಅದು ಅತ್ಯಾಚಾರದ ವ್ಯಾಪ್ತಿಗೆ ಬರುವುದಿಲ್ಲ. ಹೀಗೆಂದು ಗುರುವಾರ ಛತ್ತೀಸ್‌ಗಡ ಹೈಕೋರ್ಟ್ ತೀರ್ಪು ನೀಡಿದೆ.
ಅತ್ಯಾಚಾರ ಆರೋಪಕ್ಕೆ ಗುರಿಯಾಗಿದ್ದ ವ್ಯಕ್ತಿಯನ್ನು ದೋಷಮುಕ್ತಗೊಳಿಸುವ ವೇಳೆ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಸದರಿ ಪ್ರಕರಣದಲ್ಲಿ ಅರ್ಜಿದಾರ ಮಹಿಳೆಯು ಆ ವ್ಯಕ್ತಿಯ ಜತೆಗೆ ಕಾನೂನುಬದ್ಧವಾಗಿ ವಿವಾಹವಾಗಿದ್ದಾರೆ. ಹೀಗಾಗಿ, ಆಕೆಯ ಸಮ್ಮತಿ ಇಲ್ಲದಿದ್ದರೂ, ಪತ್ನಿಯ ಜತೆಗೆ ಬಲವಂತವಾಗಿ ಲೈಂಗಿಕ ಸಂಪರ್ಕ ಹೊಂದಿದರೆ ಅದನ್ನು ಅತ್ಯಾಚಾರ ಎಂದು ಪರಿಗಣಿಸಲಾಗದು ಎಂದು ನ್ಯಾಯಪೀಠ ತಿಳಿಸಿದೆ.
ಇದನ್ನೂ ಓದಿ:ಪಶ್ಚಿಮ ಬಂಗಾಳ ಹಿಂಸಾಚಾರ ಪ್ರಕರಣ: 9 ಪ್ರಕರಣ ದಾಖಲಿಸಿದ ಸಿಬಿಐ
ಈ ತಿಂಗಳ ಆರಂಭದಲ್ಲಿ ಮುಂಬೈನ ಸ್ಥಳೀಯ ನ್ಯಾಯಾಲಯ ಕೂಡ ಪ್ರಕರಣವೊಂದರ ವಿಚಾರಣೆ ನಡೆಸಿ, ಪತ್ನಿ ಪತಿಯ ಜತೆಗೆ ಲೈಂಗಿಕ ಸಂಪರ್ಕ ಹೊಂದುವುದರಲ್ಲಿ ತಪ್ಪಿಲ್ಲ ಎಂದು ಅಭಿಪ್ರಾಯಪಟ್ಟಿತ್ತು.