Advertisement

ಚಿಕಾಗೋ ಆಸ್ಪತ್ರೆಯಲ್ಲಿ ಗುಂಡಿನ ದಾಳಿ:ಗನ್‌ಮ್ಯಾನ್‌ ಸಹಿತ 2 ಬಲಿ

09:20 AM Nov 20, 2018 | Team Udayavani |

ಚಿಕಾಗೋ: ನಗರದ ದಕ್ಷಿಣ ಭಾಗದಲ್ಲಿರುವ ಮರ್ಸಿ ಆಸ್ಪತ್ರೆಯ ಎದುರು ಸೋಮವಾರ ದುಷ್ಕರ್ಮಿಯೊಬ್ಬ  ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ. ದಾಳಿಯಲ್ಲಿ  ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಯನ್ನು ಪೊಲೀಸರು ಹತ್ಯೆಗೈದಿದ್ದಾರೆ. 

Advertisement

ಪಾರ್ಕಿಂಗ್‌ ಪ್ರದೇಶದಲ್ಲಿ ಆಸ್ಪತ್ರೆಯ ಸಿಬಂದಿಗಳನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದೆ. ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ದುಷ್ಕರ್ಮಿಯನ್ನು ಹತ್ಯೆಗೈದಿದ್ದಾರೆ. ಕಾರ್ಯಾಚರಣೆ ವೇಳೆ ಪೊಲೀಸ್‌ ಸಿಬಂದಿಯೊಬ್ಬರು ಗಾಯಗೊಂಡಿದ್ದಾರೆ. 

ಆಸ್ಪತ್ರೆಯಲ್ಲಿರುವ ಎಲ್ಲಾ ರೋಗಿಗಳು ಸುರಕ್ಷಿತವಾಗಿದ್ದಾರೆ ಎಂದು ಚಿಕಾಗೋ ಪೊಲೀಸರು ತಿಳಿಸಿದ್ದಾರೆ. 

ಯಾವ ಉದ್ದೇಶಕ್ಕಾಗಿ ದಾಳಿ ನಡೆದಿದೆ ಎನ್ನುವುದನ್ನು ಪೊಲೀಸರು ಇದುವರೆಗೆ ತಿಳಿಸಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next