Advertisement

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

04:07 PM Oct 16, 2024 | Team Udayavani |

ಉತ್ತರಾಖಂಡ್: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಉತ್ತರಾಖಂಡದ ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ ವಿಜಯ್ ಕುಮಾರ್ ಜೋಗ್ದಂಡೆ ಅವರಿದ್ದ ಹೆಲಿಕಾಪ್ಟರ್ ಇಂದು ರಾಜ್ಯದ ಪಿಥೋರಗಢ ಜಿಲ್ಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

Advertisement

ಘಟನೆಯಿಂದ ಯಾವುದೇ ಅವಘಡ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ. ಇಂದು ಮಧ್ಯಾಹ್ನ ಸುಮಾರು ಒಂದು ಗಂಟೆಯ ಸುಮಾರಿಗೆ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿದ್ದ ಹೆಲಿಕಾಪ್ಟರ್ ಮಿಲಾಮ್ ಕಡೆಗೆ ಪ್ರಯಾಣಿಸುತ್ತಿತ್ತು ಈ ವೇಳೆ ಪ್ರತಿಕೂಲ ಹವಾಮಾನದಿಂದಾಗಿ ಹೆಲಿಕಾಪ್ಟರ್ ಉತ್ತರಾಖಂಡದ ಮುನ್ಸಿಯಾರಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಮಂಗಳವಾರ(ಅ.15) ರಂದು ಮುಖ್ಯ ಚುನಾವಣಾ ಆಯುಕ್ತರು ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಘೋಷಿಸಿದ್ದರು.

ಇದನ್ನೂ ಓದಿ: Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

Advertisement

Udayavani is now on Telegram. Click here to join our channel and stay updated with the latest news.

Next