Advertisement

ಲೈವ್‌ ಸ್ಟ್ರೀಮಿಂಗ್‌ಗೆ ಸಿಜೆಐ ನಿರ್ಧಾರ ಅಂತಿಮ: ಸುಪ್ರೀಂ

09:20 AM Feb 06, 2020 | Hari Prasad |

ಹೊಸದಿಲ್ಲಿ: ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಯಾಗುವ ಸಾಂವಿಧಾನಿಕ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯ ಪ್ರಕರಣ ವಿಚಾರಣೆಯ ಲೈವ್‌ ಸ್ಟ್ರೀಮಿಂಗ್‌ ಬಗ್ಗೆ ಮುಖ್ಯ ನ್ಯಾಯ ಮೂರ್ತಿಗಳೇ ನಿರ್ಧಾರ ಕೈಗೊಳ್ಳಬೇಕಾಗಿದೆ. ಏಕೆಂದರೆ ಇದೊಂದು ಆಡಳಿತಾತ್ಮಕ ನಿರ್ಧಾರವಾಗಿದೆ ಎಂದು ನ್ಯಾ| ಅರುಣ್‌ ಮಿಶ್ರಾ ನೇತೃತ್ವದ ನ್ಯಾಯಪೀಠ ಮಂಗಳವಾರ ಹೇಳಿದೆ.

Advertisement

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಆದೇಶವನ್ನು ನೀಡುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟವಾಗಿ ಹೇಳಿತು. ಸುಪ್ರೀಂಕೋರ್ಟ್‌ನ ಸೆಕ್ರೆಟರಿ ಜನರಲ್‌ ಪರವಾಗಿ ವಾದಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಮಾಧವಿ ದಿವಾನ್‌ 2018ರಲ್ಲಿ ನೀಡಲಾಗಿದ್ದ ತೀರ್ಪಿನ ಜಾರಿ ಬಗ್ಗೆ ಕ್ರಮ ಗಳು ಶುರುವಾಗಿವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next