Advertisement

ಸಿಜೆಐ ಹುದ್ದೆ ಆರ್ ಟಿಐ ವ್ಯಾಪ್ತಿಗೆ; ಸುಪ್ರೀಂನಿಂದ ಮತ್ತೊಂದು ಐತಿಹಾಸಿಕ ತೀರ್ಪು

11:15 AM Nov 14, 2019 | Team Udayavani |

ನವದೆಹಲಿ:ನ್ಯಾಯಾಂಗದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಸಿಜೆಐ ಹುದ್ದೆ ಕೂಡಾ ಆರ್ ಟಿಐ (ಮಾಹಿತಿ ಹಕ್ಕು ಕಾಯ್ದೆ)ವ್ಯಾಪ್ತಿಗೆ ಒಳಪಡಲಿದೆ ಎಂಬ ದೆಹಲಿ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಬುಧವಾರ ಎತ್ತಿಹಿಡಿಯುವ ಮೂಲಕ ಐತಿಹಾಸಿಕ ತೀರ್ಪನ್ನು ಪ್ರಕಟಿಸಿದೆ.

Advertisement

ಸುಪ್ರೀಂಕೋರ್ಟ್ ನೀಡುವ ಎಲ್ಲಾ ತೀರ್ಪು ಪಾರದರ್ಶಕವಾಗಿದೆ ಎಂಬುದನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಿಜೆಐ ಕಚೇರಿ ಕೂಡಾ ಆರ್ ಟಿಐ ಅಡಿ ಬರಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.

2010ರಲ್ಲಿಯೇ ಸುಪ್ರೀಂಕೋರ್ಟ್ ಸಾರ್ವಜನಿಕ ಉತ್ತರದಾಯಿತ್ವ ಹೊಂದಿದ್ದು, ಸಿಜೆಐ ಕಚೇರಿ ಕೂಡಾ ಆರ್ ಟಿಐ ಕಾಯ್ದೆಯಡಿ ಬರಬೇಕಾಗಿದೆ ಎಂದು ದೆಹಲಿ ಹೈಕೋರ್ಟ್ ತೀರ್ಪನ್ನು ನೀಡಿತ್ತು. ಈ ತೀರ್ಪು ನ್ಯಾಯಾಂಗ ಪ್ರಕ್ರಿಯೆ ಮೇಲೆ ಸಮಸ್ಯೆ ತಂದೊಡ್ಡಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದ ಪ್ರೀಂಕೋರ್ಟ್ ಪ್ರಧಾನ ಕಾರ್ಯದರ್ಶಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು.

ಪಂಚಸದಸ್ಯ ಸಾಂವಿಧಾನಿಕ ಪೀಠ ಏಪ್ರಿಲ್ 4ರಂದು ವಾದ, ಪ್ರತಿವಾದ ಆಲಿಸಿದ ನಂತರ ತೀರ್ಪನ್ನು ಕಾಯ್ದಿರಿಸಿತ್ತು. ಸಿಜೆಐ ಕೂಡಾ ಸಾರ್ವಜನಿಕ ಅಧಿಕಾರದ ವ್ಯಾಪ್ತಿಗೆ ಒಳಪಡುತ್ತಾರೆ. ಮಾಹಿತಿ ಹಕ್ಕು ಹಾಗೂ ಖಾಸಗಿತನ ಹಕ್ಕು ಎರಡೂ ಕೂಡಾ ಒಂದೇ ನಾಣ್ಯವಾಗಿದೆ ಎಂದು ತೀರ್ಪಿನಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next