ಹೊಸದಿಲ್ಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರನ್ನು ತನ್ನ ಉತ್ತರಾಧಿಕಾರಿಯಾಗಿ ಶಿಫಾರಸ್ಸು ಮಾಡಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಲಲತ್ ಅವರು ಮಂಗಳವಾರ ಬೆಳಗ್ಗೆ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಪತ್ರವನ್ನು ಹಸ್ತಾಂತರಿಸಿ ಅವರನ್ನು ಮುಂದಿನ ಸಿಜೆಐ ಎಂದು ಶಿಫಾರಸ್ಸು ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್‌ನ ಇತರ ನ್ಯಾಯಾಧೀಶರ ಸಮ್ಮುಖದಲ್ಲಿ ಪತ್ರವನ್ನು ಹಸ್ತಾಂತರಿಸಲಾಯಿತು.
ನವೆಂಬರ್ 8 ರಂದು ನಿವೃತ್ತರಾಗಲಿರುವ ನ್ಯಾಯಮೂರ್ತಿ ಲಲಿತ್ ಅವರಿಗೆ ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸಲು ಕೇಂದ್ರ ಕಾನೂನು ಸಚಿವಾಲಯವು ಕಳೆದ ಶುಕ್ರವಾರ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿತ್ತು. ಅಪರೂಪದ ಕ್ರಮದಲ್ಲಿ, ಸಚಿವಾಲಯವು ಅದರ ಬಗ್ಗೆ ಟ್ವೀಟ್ ಕೂಡ ಮಾಡಿತ್ತು.
ನ್ಯಾಯಾಧೀಶರ ನೇಮಕಾತಿಗಾಗಿ ಸುಪ್ರೀಂ ಕೋರ್ಟ್‌ನ ಕೊಲಿಜಿಯಂನ ಯಾವುದೇ ಸಭೆಯ ಅಧ್ಯಕ್ಷತೆಯನ್ನು ಮುಖ್ಯ ನ್ಯಾಯಾಧೀಶರು ನಡೆಸುವಂತಿಲ್ಲ ಅಥವಾ ಅವರ ಉತ್ತರಾಧಿಕಾರಿ ಹೆಸರಾದ ನಂತರ ಯಾವುದೇ ನೇಮಕಾತಿಯನ್ನು ತೆರವುಗೊಳಿಸಲು ಸಾಧ್ಯವಿಲ್ಲದ ಕಾರಣ ಈ ಕ್ರಮದ ಸಮಯವು ಮಹತ್ವದ್ದಾಗಿದೆ.
ಇದನ್ನೂ ಓದಿ : ಆಸ್ಕರ್ ಗೆ ನಾಮಿನೇಟ್ ಆದ ʼಛೆಲ್ಲೋ ಶೋʼ ಚಿತ್ರದ ಬಾಲನಟ ಕ್ಯಾನ್ಸರ್ ನಿಂದ ನಿಧನ