ಬೆಂಗಳೂರು: ಕೋವಿಡ್ ಸಂಬಂಧಿತ ದೇಶವ್ಯಾಪಿ ಲಾಕ್ ಡೌನ್ ಮೇ 31ರವರೆಗೆ ವಿಸ್ತರಣೆಗೊಂಡಿದೆ.
ಈ ಸಂಬಂಧವಾಗಿ ಇಂದು ಆದೇಶವನ್ನು ಪ್ರಕಟಿಸಿರುವ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತತ್ಸಂಬಂದಿ ಸೂಚನೆಗಳನ್ನೂ ರವಾನಿಸಿದೆ.
ಮತ್ತು ನಾಲ್ಕನೇ ಹಂತದ ಲಾಕ್ ಡೌನ್ ಸಂದರ್ಭದಲ್ಲಿ ಅನುಸರಿಸಬೇಕಾದ ನಿಯಮಗಳ ಮಾರ್ಗಸೂಚಿಗಳನ್ನೂ ಸಹ ಕೇಂದ್ರ ಈಗಾಗಲೇ ಪ್ರಕಟಿಸಿದೆ.
ಈ ಹಿನ್ನಲೆಯಲ್ಲಿ ಲಾಕ್ ಡೌನ್ 4.0 ರ ಕುರಿತು ರಾಜ್ಯದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತಾಗಿ ಚರ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೇ 18 ರಂದು ಬೆಳಿಗ್ಗೆ 11 ಗಂಟೆಗೆ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆಯೊಂದನ್ನು ಕರೆದಿದ್ದಾರೆ.
ಈ ಸಭೆಯಲ್ಲಿ ಮುಂದಿನ ಹಂತದ ಲಾಕ್ ಡೌನ್ ಅವಧಿಯಲ್ಲಿ ರಾಜ್ಯದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.