Advertisement

ಮಳೆ ತುರ್ತು ನಿರ್ವಹಣೆ: 50 ಕೋ. ರೂ. ಬಿಡುಗಡೆಗೆ ಸಿಎಂ ಸೂಚನೆ

03:16 AM Aug 06, 2020 | Hari Prasad |

ಬೆಂಗಳೂರು: ರಾಜ್ಯಾ ದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಜತೆಗೆ ತುರ್ತು ನಿರ್ವಹಣೆಗಾಗಿ ತತ್‌ಕ್ಷಣವೇ 50 ಕೋ. ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ.

Advertisement

ನಗರದ ಮಣಿಪಾಲ್‌ ಆಸ್ಪತ್ರೆಯಲ್ಲಿ ಕೋವಿಡ್‌-19ಕ್ಕೆ ಚಿಕಿತ್ಸೆ ಪಡೆಯುತ್ತಿರುವ ಅವರು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ಬಹುತೇಕ ಕಡೆ ಭಾರೀ ಮಳೆಯಾಗುತ್ತಿರುವ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ಅವರೊಂದಿಗೆ ದೂರವಾಣಿ ಕರೆಯಲ್ಲಿ ಚರ್ಚಿಸಿದ ಯಡಿಯೂರಪ್ಪ ಅವರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲಾಧಿಕಾರಿ ಜತೆ ಸಂಪರ್ಕ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ ಅವರು ಎಲ್ಲ ಹಿರಿಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.  ಭಾರೀ ಮಳೆಯಿಂದ ಚಿಕ್ಕಮಗ ಳೂರಿನಲ್ಲಿ ಬಾಳೆ ತೋಟ ಹಾಳಾಗಿರುವ ಬಗ್ಗೆ ಮಾಧ್ಯಮದಲ್ಲಿ ವೀಕ್ಷಿಸಿದ ಮುಖ್ಯಮಂತ್ರಿ ತತ್‌ಕ್ಷಣವೇ ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.

ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗೆ ಕರೆ ಮಾಡಿದ ಸಿಎಂ ಯಡಿಯೂರಪ್ಪ ಅವರು, ‘ಮೂಡಿಗೆರೆ ತಾಲೂಕಿನ ಕೆಂಬತ್ಮಕ್ಕಿಯಲ್ಲಿ ಮಳೆಯಿಂದ 5 ಎಕರೆ ಬಾಳೆ ತೋಟಕ್ಕೆ ಹಾನಿಯಾಗಿದೆ. ತಾವೇ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡಬೇಕು’ ಎಂದು ಸೂಚನೆ ನೀಡಿದರು.

Advertisement

ಸಾಧನೆಗೆ ಮೆಚ್ಚುಗೆ
ಕನ್ನಡದಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆದು ಉತ್ತೀರ್ಣರಾದ ದರ್ಶನ್‌ ಅವರಿಗೆ ಮುಖ್ಯ ಮಂತ್ರಿಗಳು ಅವರು ಅಭಿನಂದನೆ ಸಲ್ಲಿಸಿದ್ದಾರೆ. ದರ್ಶನ್‌ ಸಾಧನೆ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಪಡೆದ ಯಡಿಯೂರಪ್ಪ ಅವರು ಬಳಿಕ ದೂರವಾಣಿ ಕರೆ ಮಾಡಿ ದರ್ಶನ್‌ ಅವರನ್ನು ಅಭಿನಂದಿಸಿ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಟಿ.ವಿ.ಯಲ್ಲೇ ಶಿಲಾನ್ಯಾಸ ವೀಕ್ಷಿಸಿದ ಯಡಿಯೂರಪ್ಪ
ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮದ ನೇರ ಪ್ರಸಾರ ವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಸ್ಪತ್ರೆಯಲ್ಲಿದ್ದುಕೊಂಡೇ ವೀಕ್ಷಿಸಿದರು. ಬೆಳಗ್ಗಿನಿಂದಲೇ ಕಾರ್ಯಕ್ರಮ ವೀಕ್ಷಣೆಗೆ ಕಾತರರಾಗಿದ್ದ ಸಿಎಂ ಸುಮಾರು ಮೂರ್‍ನಾಲ್ಕು ಗಂಟೆ ಕಾರ್ಯಕ್ರಮ ವೀಕ್ಷಿಸಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಭಾಷಣವನ್ನು ಆಲಿಸಿದರು ಎಂದು ಮೂಲಗಳು ತಿಳಿಸಿವೆ.

ಕರಸೇವೆ ದಿನಗಳ ಮೆಲುಕು…
‘ಶ್ರೀರಾಮ ಜನ್ಮ ಭೂಮಿಯಲ್ಲಿಯೇ ಶ್ರೀ ರಾಮಲಲ್ಲಾನ ಮಂದಿರ ನಿರ್ಮಾಣವಾಗಬೇಕು ಎನ್ನುವ ಬಿಜೆಪಿಯ ಬದ್ಧತೆ ಹಿಂದೆ ನಿರಂತರ ಹೋರಾಟವಿದೆ. ಹಾಗೂ ತ್ಯಾಗ, ಬಲಿದಾನಗಳಿವೆ. ಈ ಹೊತ್ತಿನಲ್ಲಿ ಕರಸೇವೆಯ ದಿನಗಳು ಮತ್ತೆ ನೆನಪಾಗುತ್ತಿವೆ. ಅಂದಿನ ಕೆಲವು ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದೇನೆ’ ಎಂದು ನಾಲ್ಕು ಚಿತ್ರಗಳನ್ನು ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next