ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ.
ಈ ಸಂಬಂಧ ಸ್ವತಃ ಟ್ವೀಟರ್ ಹಾಗೂ ಫೇಸ್ಬುಕ್ ಪುಟಗಳಲ್ಲಿ ಮುಖ್ಯಮಂತ್ರಿಯವರು ಸ್ಪಷ್ಟ ಪಡಿಸಿದ್ದಾರೆ.
‘ನನ್ನ ಕೋವಿಡ್ 19 ಪರೀಕ್ಷಾ ವರದಿಯು ಪಾಸಿಟಿವ್ ಎಂದು ಬಂದಿದೆ. ಈ ಸೋಂಕಿಗೆ ಸಂಬಂಧಿಸಿದ ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ’ ಎಂದು ಅವರು ತಮ್ಮ ಟ್ವಿಟ್ಟರ್ ಸಂದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಗೂ ಕೋವಿಡ್ ಸೋಂಕು ದೃಢ!
ಇದನ್ನೂ ಓದಿ: ಕೋವಿಡ್ ಸೋಂಕಿಗೆ ತುತ್ತಾಗಿದ್ದ ಉತ್ತರಪ್ರದೇಶ ಸಚಿವೆ ಕಮಲ ರಾಣಿ ನಿಧನ
ರಾಜ್ಯದ ಕೆಲವು ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರಿಗೆ ಕೋವಿಡ್ 19 ಸೋಂಕು ಇರುವುದು ಈ ಹಿಂದೆ ದೃಢಪಟ್ಟಿತ್ತು. ಈ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೋವಿಡ್ 19 ಪರೀಕ್ಷೆಗೆ ಒಳಗಾಗಿದ್ದರು. ಅದರ ರಿಸಲ್ಟ್ ಈಗ ಬಂದಿದ್ದು, ಅವರಲ್ಲಿ ಸೋಂಕು ಪಾಸಿಟಿವ್ ಇರುವುದು ದೃಢಪಟ್ಟಿದೆ.
ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಕೋವಿಡ್ 19 ಸೊಂಕು ದೃಢಪಟ್ಟಿತ್ತು ಮತ್ತು ಅವರೂ ಸಹ ದೆಹಲಿಯ ವೇದಾಂತ್ ಆಸ್ಪತ್ರೆಯಲ್ಲಿ ದಾಖಲುಗೊಂಡಿದ್ದಾರೆ. ಮಾತ್ರವಲ್ಲದೇ, ಕೋವಡ್ 19 ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉತ್ತರ ಪ್ರದೇಶ ಸರಕಾರದ ಸಚಿವೆ ಕಮಲಾ ರಾಣಿ ಸಹ ಇಂದು ಕೋವಿಡ್ 19 ಸೋಂಕಿನಿಂದ ನಿಧನ ಹೊಂದಿದ್ದರು.