ಬೆಂಗಳೂರು: ಹೃದಯ ತಪಾಸಣೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಆ್ಯಂಜಿಯೋಪ್ಲಾಸ್ಟ್ ಚಿಕಿತ್ಸೆಗೆ ಒಳಗಾಗಿರುವ ಮಾಜೀ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯ ಅವರನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಇನ್ನಿತರ ಬಿಜೆಪಿ ನಾಯಕರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಮುಖ್ಯಮಂತ್ರಿಯವರ ಜೊತೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಇದ್ದರು.
ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಆಂಜಿಯೋಪ್ಲಾಸ್ಟ್ ಚಿಕಿತ್ಸೆ ಮಾಡಿಸಿಕೊಂಡಿರುವ ವಿಚಾರವನ್ನು ಸ್ವತಃ ಸಿದ್ಧರಾಮಯ್ಯನವರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೊಂಡಿದ್ದರು.
Related Articles
ತನ್ನನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿಯವರಿಗೆ ಮತ್ತು ಬೊಮ್ಮಾಯಿ ಹಾಗೂ ಈಶ್ವರಪ್ಪನವರಿಗೆ ಸಿದ್ಧರಾಮಯ್ಯನವರು ಕೃತಜ್ಞತೆ ಅರ್ಪಿಸಿದ್ದಾರೆ.