ಬೆಂಗಳೂರು: ಅಲ್ಪಸಂಖ್ಯಾಕರ ಕಾಲನಿ ಅಭಿವೃದ್ಧಿ ಯೋಜನೆ ಬೆಂಗಳೂರು ಸೇರಿದಂತೆ 11 ಮಹಾನಗರ ಪಾಲಿಕೆ ಗಳ ವ್ಯಾಪ್ತಿಯಲ್ಲಿ ಮಾತ್ರ ಸೀಮಿತವಾಗಿರುತ್ತದೆ.
ಹೀಗಾಗಿ ಈ ಪ್ರದೇಶದಲ್ಲಿ ಅಲ್ಪಸಂಖ್ಯಾಕರು ವಾಸವಿರುವ ಕಾಲನಿಗಳ ಅಭಿವೃದ್ಧಿಯನ್ನು ಕೇಂದ್ರದ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಕೇಂದ್ರ ಒದಗಿಸುವ ಅನುದಾನವನ್ನು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರ ಬಳಕೆಗೆ ಅವಕಾಶ ಇದೆ. ಕಳೆದ ವರ್ಷ ಮಂಗಳೂರಿನಲ್ಲಿ ವಾಸವಿರುವ ಅಲ್ಪಸಂಖ್ಯಾಕರ ಪ್ರದೇಶಗಳ ಅಭಿವೃದ್ಧಿಗಾಗಿ ಸುಮಾರು 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿತ್ತು ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ನ ಯು.ಟಿ. ಖಾದರ್ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಈ ನಿಟ್ಟಿನಲ್ಲಿ ಕಾನೂನಿನಲ್ಲಿನ ನಿಯಮ ಸಡಿಲಿಕೆ ಮಾಡಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:ಆರ್‌ಎಸ್‌ಎಸ್ ಕಾರ್ಯಕರ್ತನ ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಆದೇಶ ಕಾಯ್ದಿರಿಸಿದ ಹೈಕೋರ್ಟ್
ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾಕರು ಹೆಚ್ಚಿರುವ ಕಾಲನಿಗಳನ್ನು ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಮೂಲಸೌಕರ್ಯ ಕಲ್ಪಿಸಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯ ಮಂತ್ರಿ ಬೊಮ್ಮಾಯಿ ಭರವಸೆ ನೀಡಿದ್ದಾರೆ.