Advertisement

ಚಿಕ್ಕಮಗಳೂರಿನಲ್ಲಿಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರವಾಸ

09:11 AM Nov 15, 2022 | Team Udayavani |

ಚಿಕ್ಕಮಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಇಂದು ಚಿಕ್ಕಮಗಳೂರು ಪ್ರವಾಸ ಮಾಡಲಿದ್ದು, ಜನಸಂಕಲ್ಪ ಯಾತ್ರೆ ಸೇರಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

Advertisement

ಕಡೂರು-ತರೀಕೆರೆ ತಾಲೂಕಿನಲ್ಲಿ ಸಿಎಂ ಪ್ರವಾಸ ಮಾಡಲಿದ್ದು, ಮೊದಲು ಕಡೂರು ಪಟ್ಟಣದಲ್ಲಿ ಜನಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 10:30ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಕಡೂರಿಗೆ ಆಗಮಿಸಲಿದ್ದಾರೆ.

ಬಿಎಸ್ ವೈ ಸಿಎಂ ಆಗಿದ್ದಾಗ ನೀರಾವರಿ ಯೋಜನೆಗೆ ಅನುದಾನ ನೀಡಲಾಗಿತ್ತು. 108 ಕೆರೆಗಳಿಗೆ ನೀರು ತುಂಬಿಸಲು 1289 ಕೋಟಿ ಬಿಡುಗಡೆ ಮಾಡಲಾಗಿತ್ತು. ಆ ವೇಳೆ ಬಸವರಾಜ ಬೊಮ್ಮಾಯಿ ಅವರು ನೀರಾವರಿ ಸಚಿವರಾಗಿದ್ದರು. ಹೀಗಾಗಿ ಸಿಎಂ, ಮಾಜಿ ಸಿಎಂ ಇಬ್ಬರಿಗೂ ವಿಶೇಷ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಡೂರು ಪಟ್ಟಣದ ಎಪಿಎಂಸಿ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ಆ ಬಳಿಕ ಮಧ್ಯಾಹ್ನ 1:30 ಕ್ಕೆ ತರೀಕೆರೆಯಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 600 ಕೋಟಿ ವೆಚ್ಚದ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಚಾಲನೆ ನೀಡಲಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next