Advertisement

ಸಿಐಡಿ ಎಡಿಜಿಪಿ ಚರಣ್ ರೆಡ್ಡಿ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂತಾಪ

12:42 PM Mar 13, 2020 | Mithun PG |

ಬೆಂಗಳೂರು:  ಸಿಐಡಿ ಅಪರ ಪೊಲೀಸ್ ಮಹಾ ನಿರ್ದೇಶಕ  ಚರಣ್ ರೆಡ್ಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್  ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

ಚರಣ್ ರೆಡ್ಡಿ ಅವರು ಒಬ್ಬ ದಕ್ಷ, ನೇರ ನಡೆನುಡಿಯ ಅಧಿಕಾರಿಯಾಗಿದ್ದರು. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಬದವರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

56 ವರ್ಷದ ಚರಣ್ ರೆಡ್ಡಿ ಕ್ಯಾನ್ಸರ್ ನಿಂದ ಬಳಲುತ್ತಿದ್ದು. ಕಳೆದ ತಿಂಗಳು ಮಹಾವೀರ್ ಜೈನ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದರು.

ಆಂಧ್ರ ಪ್ರದೇಶದವರಾದ ಚರಣ್​ ರೆಡ್ಡಿ 1993ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಬೆಂಗಳೂರು ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ಅವರು, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಲೋಕಾಯುಕ್ತ ಎಸ್.ಐ.ಟಿ. ಮುಖ್ಯಸ್ಥರಾಗಿದ್ದರು. ಐದು ವರ್ಷಗಳ ಕಾಲ ಸಿಬಿಐನಲ್ಲೂ ಕೆಲಸ ಮಾಡಿದ್ದರು. ಸದ್ಯ ಸಿಐಡಿ ಎಡಿಜಿಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next