Advertisement
ವರ್ಚುವಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕೋವಿಡ್-19ರ ಎರಡನೇ ಅಲೆಯ ನಿಒಯಂತ್ರಣ ಹಾಗೂ ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸರ್ಕಾರದ ಈ ಪ್ರಯತ್ನದಲ್ಲಿ ಖಾಸಗಿ ಸಂಸ್ಥೆಗಳೂ ಕೈಜೋಡಿಸಿರುವುದು ಅತ್ಯಂತ ಶ್ಲಾಘನೀಯ ಎಂದು ತಿಳಿಸಿದರು.
Related Articles
Advertisement
ಆಸ್ಪತ್ರೆಗಳ ಮೂಲಸೌಕರ್ಯ ಬಲಪಡಿಸುವ ಪ್ರಕ್ರಿಯೆ ಇನ್ನೂ ಮುಂದುವರೆದಿದೆ. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಸಹಾಯಧನ ನೀಡಲಾಗುತ್ತಿದೆ ಎಂದು ವಿವರಿಸಿದರು.
ರಾಜ್ಯದಲ್ಲಿ ಹೆಚ್ಚುತ್ತಿರುವ ಆಮ್ಲಜನಕದ ಬೇಡಿಕೆಯನ್ನು ಸರಿದೂಗಿಸಲು ಮೂರು ಅಂಶಗಳ ಕಾರ್ಯತಂತ್ರವನ್ನು ರೂಪಿಸಿದೆ. ಅದರಂತೆ ಲಿಕ್ವಿಡ್ ಆಕ್ಸಿಜನ್ ಪೂರೈಕೆ ಹೆಚ್ಚಳ, ಆಕ್ಸಿಜನ್ ಜನರೇಟರುಗಳ ಮೂಲಕ ಸ್ಥಳೀಯವಾಗಿ ಆಮ್ಲಜನಕ ಉತ್ಪಾದನೆ ಹೆಚ್ಚಳ ಹಾಗೂ ಆಕ್ಸಿಜನ್ ಕಾನ್ಸಂಟ್ರೇಟರುಗಳು ಹಾಗೂ ಸಿಲಿಂಡರುಗಳನ್ನು ಹೆಚ್ಚಾಗಿ ಖರೀದಿಸುವ ಮೂಲಕ ಆಮ್ಲಜನಕ ಕೊರತೆ ನೀಗಿಸಲು ಪ್ರಯತ್ನಿಸಲಾಗುತ್ತಿದೆ.
ಖಾಸಗಿ ಕಂಪೆನಿಗಳು, ಸ್ವಯಂ ಸೇವಾ ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ಹಾಗೂ ನಾಗರಿಕ ಬಂಧುಗಳು ಕೋವಿಡ್ ನಿರ್ವಹಣೆಯಲ್ಲಿ ಕೈಜೋಡಿಸುತ್ತಿರುವುದು ಒಂದು ಮಾದರಿ ಬೆಳವಣಿಗೆಯಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಮಾತನಾಡಿ, ಈ ಕೋವಿಡ್ ಆಸ್ಪತ್ರೆಯು ಸ್ಥಳೀಯ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಮಾತನಾಡಿದ ಸಜ್ಜನ್ ಜಿಂದಲ್ ಅವರು ಈ ಆಸ್ಪತ್ರೆಯನ್ನು ಬಳ್ಳಾರಿ ಹಾಗೂ ಸುತ್ತಮುತ್ತಲ ಜಿಲ್ಲೆಗಳ ಗ್ರಾಮೀಣ ಜನರಿಗೆ ಅರ್ಪಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮೊದಲಾದವರು ಭಾಗವಹಿಸಿದ್ದರು.