Advertisement

ಪ್ರಾಧಿಕಾರದ ಮನವೊಲಿಕೆಗೆ ಮುಖ್ಯಮಂತ್ರಿ ಸೂಚನೆ

06:49 AM Jul 10, 2019 | Team Udayavani |

ಬೆಂಗಳೂರು: ಕಾವೇರಿ ನೀರು ಬಿಡುಗಡೆ ಸಂಬಂಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮನವೊಲಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.

Advertisement

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಮಂಡ್ಯದ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತಮಿಳುನಾಡಿಗೆ ನೀರು ಹರಿಸಿ, ನಮ್ಮ ರಾಜ್ಯಕ್ಕೂ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮನವೊಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಪ್ರಾಧಿಕಾರವು ಸರ್ಕಾರದ ಮನವಿಗೆ ಸ್ಪಂದಿಸುವ ವಿಶ್ವಾಸ ನನಗಿದೆ’ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next