Advertisement

ಮುಸ್ಲಿಂ ಮುಖಂಡರೊಂದಿಗೆ ಮುಖ್ಯಮಂತ್ರಿ ಸಭೆ

09:24 AM Feb 03, 2018 | |

ಬೆಂಗಳೂರು: ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಮುಸಲ್ಮಾನರ ಓಲೈಕೆಗೆ ಆಡಳಿತಾರೂಢ ಕಾಂಗ್ರೆಸ್‌ ಮುಂದಾಗಿದ್ದು ಸಿಎಂ ಸಿದ್ದರಾಮಯ್ಯ ಗುರುವಾರ ಮುಸ್ಲಿಂ ಧಾರ್ಮಿಕ ಮುಖಂಡರ ಜತೆ ಸಮಾಲೋಚನೆ ನಡೆಸಿದ್ದಾರೆ. ಸಚಿವ ಯು.ಟಿ.ಖಾದರ್‌ ನಿವಾಸದಲ್ಲಿ ಔತಣಕೂಟ ಏರ್ಪಡಿಸಿದ್ದು ಅಲ್ಲಿ ಧಾರ್ಮಿಕ ಮುಖಂಡರು ಪಾಲ್ಗೊಂಡಿದ್ದರು. 

Advertisement

ಈ ಸಂದರ್ಭದಲ್ಲಿ ಜೆಡಿಎಸ್‌ ಬಂಡಾಯ ಶಾಸಕ ಜಮೀರ್‌ ಅಹಮದ್‌ ಸಹ ಹಾಜರಿದ್ದರು ಎನ್ನಲಾಗಿದೆ.  ಸರ್ಕಾರವೇ ನಡೆಸಿರುವ ಆರ್ಥಿಕ ಹಾಗೂ ಸಾಮಾಜಿಕ ಗಣತಿಯಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ 2ನೇ ಸ್ಥಾನದಲ್ಲಿದ್ದು ಅದಕ್ಕೆ ತಕ್ಕಂತೆ ವಿಧಾನಸಭೆ ಚುನಾವಣೆಗೆ ಟಿಕೆಟ್‌ ನೀಡಬೇಕು ಎಂದು ಇದೇ ವೇಳೆ ಮುಸ್ಲಿಂ ಧಾರ್ಮಿಕ ಮುಖಂಡರು ಮುಖ್ಯಮಂತ್ರಿಯಲ್ಲಿ ಮನವಿ ಮಾಡಿದರು ಎಂದು ತಿಳಿದು ಬಂದಿದೆ. ಕಾಂಗ್ರೆಸ್‌ ಮೊದಲಿನಿಂದಲೂ ಮುಸ್ಲಿಂ ಸಮುದಾಯಕ್ಕೂ ಆದ್ಯತೆ ನೀಡುತ್ತದೆ ಎಂದು ಸಿಎಂ ಭರವಸೆ ನೀಡಿದರು. ಮುಸ್ಲಿಂ ಸಮುದಾಯ ಜೆಡಿಎಸ್‌ ಕಡೆ ಹೋಗದಂತೆ ಧಾರ್ಮಿಕ ಮುಖಂಡರ ಮೂಲಕ ತಡೆಯುವ ಪ್ರಯತ್ನ ಇದು ಎಂದು ಹೇಳಲಾಗಿದೆ.  ಜತೆಗೆ, ಜೆಡಿಎಸ್‌ ಬಂಡಾಯ ಶಾಸಕ ಜಮೀರ್‌ ಅಹಮದ್‌ಗೆ ಹೆಚ್ಚು ಆದ್ಯತೆ ನೀಡಿ ಪಕ್ಷದಲ್ಲಿರುವ ಮುಸ್ಲಿಂ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ತನ್ವೀರ್‌ ಸೇsಠ್ ಸೇರಿ ಇತರೆ ನಾಯಕರು ಮುನಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ, ಅವರನ್ನು ಸಮಾಧಾನಪಡಿಸಲು ಧಾರ್ಮಿಕ ಮುಖಂಡರ ಸಭೆ ನಡೆಸಲು ಸೂಚಿಸಿ ಪಾಲ್ಗೊಳ್ಳುತ್ತಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next