Advertisement

Chief Minister; ಅಧಿಕಾರ ಹಸ್ತಾಂತರ ಸದ್ಯಕ್ಕೆ ಇಲ್ಲ: ಡಿಕೆಶಿ ತೇಪೆ ಹಚ್ಚುವ ಪ್ರಯತ್ನ

12:14 AM Dec 06, 2024 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಅಧಿಕಾರ ಹಸ್ತಾಂತರದ ಬಗ್ಗೆ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಭಿನ್ನ ಹೇಳಿಕೆಗಳು ಕೇಳಿಬರುತ್ತಿರುವ ಬೆನ್ನಲ್ಲೇ “ಸದ್ಯಕ್ಕೆ ಅಧಿಕಾರ ಹಸ್ತಾಂತರದ ಪ್ರಸ್ತಾವವೇ ಇಲ್ಲ; ಯಾವುದೇ ಸಮಸ್ಯೆ ಇಲ್ಲದೆ ಸರಕಾರದ ಅವಧಿ ಪೂರ್ಣಗೊಳಿಸುತ್ತೇವೆ’ ಎಂದು ಹೇಳುವ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅಪಸ್ವರಗಳಿಗೆ ತೇಪೆ ಹಚ್ಚುವ ಪ್ರಯತ್ನ ಮಾಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು ನಿಮ್ಮ (ಮಾಧ್ಯಮ ಪ್ರತಿನಿಧಿಗಳ) ಮುಂದೆ ಏನೂ ಮಾತನಾಡಿಲ್ಲ. ಗೃಹ ಸಚಿವ ಪರಮೇಶ್ವರ್‌ ಹಾಗೂ ಇತರರ ಜತೆಗೂ ಮಾತನಾಡಿಲ್ಲ. ವಾಹಿನಿಯೊಂದರಲ್ಲಿ ನನ್ನದೇ ಆದ ವಿಚಾರ ಪ್ರಸ್ತಾವ ಮಾಡಿದ್ದೆ. ಅದನ್ನು ನಿಮ್ಮ ಮುಂದೆ ಹೇಳಲು ಸಾಧ್ಯವೇ? ಈ ವಿಚಾರವಾಗಿ ಮುಖ್ಯಮಂತ್ರಿಗಳು ನಿನ್ನೆ ಯಾವುದೇ ಚರ್ಚೆ ಇಲ್ಲ ಎಂದು ಹೇಳಿದ್ದಾರೆ. ನಾನೂ ಚರ್ಚೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿದ್ದೇನೆ. ಅವರ ಮಾತನ್ನು ನಾನು ಒಪ್ಪುತ್ತೇನೆ ಎಂದರು.

ಸಮಾವೇಶದ ಮೂಲಕ ಬಲಪ್ರದರ್ಶನ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ನಮಗೆ ಬಲಪ್ರದರ್ಶನದ ಅಗತ್ಯವಿಲ್ಲ. ನಮ್ಮ ಪಕ್ಷದ ಆಚಾರ ವಿಚಾರಗಳನ್ನು ಜನರಿಗೆ ತಿಳಿಸಲು ಕಾರ್ಯಕ್ರಮ ಮಾಡಿದರೆ ಬಿಜೆಪಿ ಮತ್ತು ಜೆಡಿಎಸ್‌ನವರಿಗೆ ಏಕೆ ಹೊಟ್ಟೆಯುರಿಯುತ್ತದೆ ಎಂದು ಕೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next